ಕಾರ್ಕಳ: ಚೇತನಾ ವಿಶೇಷ ಶಾಲಾ ವಿದ್ಯಾರ್ಥಿಗಳೊಂದಿಗೆ ಸಿಬ್ಬಂದಿ ವರ್ಗ ಹಾಗೂ ಪಾಲಕರು ದೀಪಾವಳಿ ಹಬ್ಬವನ್ನು ಆಚರಿಸಿದರು.
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಅಧ್ಯಕ್ಷರಾದ ರೊಟೇರಿಯನ್ ಕೆ. ಸುರೇಂದ್ರ ನಾಯಕ್ ಇವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು.
ಅತಿಥಿಗಳಾಗಿ ಕರ್ನಾಟಕ ಬ್ಯಾಂಕಿನ ಕಾರ್ಕಳ ಶಾಖಾ ಪ್ರಬಂಧಕರಾದ ಮೂರ್ತಿ ಸಿ ರಾವ್, ಕಾರ್ಪೋರೇಷನ್ ಬ್ಯಾಂಕಿನ ನಿವೃತ್ತ ಅಧಿಕಾರಿ ಲಕ್ಷö್ಮಣ್ ಕುಡ್ವಾ, ಶಾಲಾ ಹಿತೈಷಿ ಟಿ. ಸುಧಾಕರ್ ಪ್ರಭು, ಟ್ರಸ್ಟ್ನ ಗೌರವಾಧ್ಯಕ್ಷರಾದ ಬಿ. ಗಣಪತಿ ಹೆಗ್ಡೆ, ಅಧ್ಯಕ್ಷರಾದ ಎಂ ಗಣಪತಿ ಪೈ, ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾರ್ಯದರ್ಶಿ ರಘುನಾಥ್ ಶೆಟ್ಟಿ ಸಂಸ್ಥೆಯ ಬಗ್ಗೆ ಪ್ರಸ್ತಾವನೆಗೈದು, ಸ್ವಾಗತಿಸಿದರು. ಶಿಕ್ಷಕಿ ಶೈಲಜಾ ಪ್ರಾರ್ಥಿಸಿದರು. ಶಿಕ್ಷಕಿ ಮಂಜುಳಾ ಸಂಸ್ಥೆಯಲ್ಲಿ ದೀಪಾವಳಿ ಆಚರಣೆಯ ಕುರಿತು ವಿವರಿಸಿಮುಖ್ಯೋಪಾಧ್ಯಾಯಿನಿ ಹೇಮಲತಾ ವಂದಿಸಿ, ಅಶ್ವಿನಿ ಕಾರ್ಯಕ್ರಮ ನಿರೂಪಿಸಿದರು.
ದೀಪಾವಳಿ ಹಬ್ಬದ ವಿಶೇಷ ಭೋಜನಕ್ಕೆ ವಿದ್ಯಾರ್ಥಿಗಳ ಪೋಷಕರು ಹಾಗೂ ಶಿಕ್ಷಕಿಯರು ವಿವಿಧ ಬಗೆಯ ಖಾದ್ಯಗಳನ್ನು ತಯಾರಿಸಿ ಹಬ್ಬವನ್ನು ಆಚರಿಸಿದರು.