
ನವದೆಹಲಿ, ಅ.27 : ದೇಶದಲ್ಲಿ ಬೀದಿ ನಾಯಿಗಳ ಹಾವಳಿಯು ಮಿತಿಮೀರಿದ್ದು, ಈ ಕುರಿತು ಸುಪ್ರೀಂ ಕೋರ್ಟ್ ಕಳವಳ ವ್ಯಕ್ತಪಡಿಸಿ, ಸೂಕ್ತ ಕ್ರಮಕೈಗೊಳ್ಳುವಂತೆ ಎಲ್ಲಾ ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಿತ್ತು. ಆದರೆ ಸುಪ್ರೀಂ ಕೋರ್ಟ್ ನಿರ್ದೇಶನ ಪಾಲಿಸದ ರಾಜ್ಯ ವಿರುದ್ಧ ಸುಪ್ರೀಂ ಗರಂ ಆಗಿದ್ದು, ನ್ಯಾಯಾಯಲಕ್ಕೆ ಅಫಿಡವಿಟ್ ಸಲ್ಲಿಸದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳು ನವೆಂಬರ್ 3 ರಂದು ವೈಯಕ್ತಿಕವಾಗಿ ಖುದ್ದು ಹಾಜರಿರಬೇಕು ಎಂದು ಸುಪ್ರೀಂ ಕೋರ್ಟ್ ಆದೇಶಿಸಿದೆ.
ದೆಹಲಿ, ಪಶ್ಚಿಮ ಬಂಗಾಳ ಮತ್ತು ತೆಲಂಗಾಣದ ಎಂಸಿಡಿಗಳು ಮಾತ್ರ ಅಫಿಡವಿಟ್ ಸಲ್ಲಿಸಿವೆ ಎಂದು ಸುಪ್ರೀಂ ಕೋರ್ಟ್ ಗಮನಿಸಿದೆ ಮತ್ತು ಈ ಮೂರು ರಾಜ್ಯಗಳನ್ನು ಹೊರತುಪಡಿಸಿ,ಉಳಿದ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಬೆಳಿಗ್ಗೆ 10.30 ಕ್ಕೆ ನ್ಯಾಯಾಲಯದ ಮುಂದೆ ಹಾಜರಾಗಬೇಕು ಮತ್ತು ಅನುಸರಣಾ ಅಫಿಡವಿಟ್ ಗಳನ್ನು ಏಕೆ ಸಲ್ಲಿಸಲಾಗಿಲ್ಲ ಎಂಬ ವಿವರಣೆಯನ್ನು ನೀಡಬೇಕು ಎಂದು ನಿರ್ದೇಶಿಸಿದೆ.






