Share this news

ಮಣಿಪಾಲ: ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾನಗರ ಇಲ್ಲಿಯ ಮೊದಲ ಎನ್.ಎಸ್.ಎಸ್. ವಾರ್ಷಿಕ ವಿಶೇಷ ಶಿಬಿರ – 2025ರ ಉದ್ಘಾಟನಾ ಕಾರ್ಯಕ್ರಮವು ಪಿ. ಎಮ್. ಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿಯಲ್ಲಿ ನಡೆಯಿತು.

ಕುಕ್ಕೆಹಳ್ಳಿ ಗ್ರಾಮ ಪಂಚಾಯತ್ ನ ಅಧ್ಯಕ್ಷರಾದ ಪುರಂದರ ಕೋಟ್ಯಾನ್ ಶಿಬಿರವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕರಾದ ಸಂತೋಷ್ ನೆಲ್ಲಿಕಾರು ದಿಕ್ಸೂಚಿ ಭಾಷಣ ಮಾಡಿ, ಎನ್.ಎಸ್.ಎಸ್. ಇತಿಹಾಸವನ್ನು ತಿಳಿಸಿ ಇದರಿಂದ ವಿದ್ಯಾರ್ಥಿಗಳಿಗೆ ಆಗುವ ಪ್ರಯೋಜನಗಳ ಬಗ್ಗೆ ಹೇಳಿದರು.

ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ದಿಲೀಪ್ ಹೆಗ್ಡೆ ಶತಮಾನದ ಇತಿಹಾಸ ಹೊಂದಿರುವ ನಮ್ಮ ಊರಿನ ಶಾಲೆಯಲ್ಲಿ ಶಿಬಿರ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.

ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಗಣೇಶ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಅಕಾಡೆಮಿಕ್ ಡೀನ್ ಡಾ.ಮಿಥುನ್. ಯು, ಸಾರ್ವಜನಿಕ ಸಂಪರ್ಕಾಧಿಕಾರಿ ಜ್ಯೋತಿ ಪದ್ಮನಾಭ ಭಂಡಿ, , ಪಿಎಂ ಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿಯ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಪ್ರಸಾದ್ ಹೆಗ್ಡೆ, ಕುಕ್ಕೆಹಳ್ಳಿಯ ಉದ್ಯಮಿಗಳಾದ ಹರೀಶ್ ಪೂಜಾರಿ ಒಳಮಡಿ, ಪಿ.ಎಂ.ಶ್ರೀ. ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಸುಕೇಶ್ ಮುಖ್ಯೋಪಾಧ್ಯಾಯರಾದ ಶ್ರೀಮತಿ ಸರಸ್ವತಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಪ್ರಸಾದ್ ಹೆಗ್ಡೆ, ಉದ್ಯಮಿಗಳಾದ ತ್ರಿವಿಕ್ರಮ ಕಿಣ , ದೇವೇಂದ್ರ ನಾಯಕ್ ಉಪಸ್ಥಿತರಿದ್ದರು.

ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ಹಾಗೂ ಉಪಪ್ರಾಂಶುಪಾಲರಾದ ರವಿ ಜಿ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಆಂಗ್ಲ ಭಾಷಾ ಉಪನ್ಯಾಸಕಿ ಶ್ರೀಮತಿ ಶಮಿತಾ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Leave a Reply

Your email address will not be published. Required fields are marked *