
ಹೆಬ್ರಿ: ಹೆಬ್ರಿಯ ವಿಜಯಲಕ್ಮೀ ಬಾರ್ ಎಂಡ್ ರೆಸ್ಟೊರೆಂಟ್ ಮತ್ತು ಲಾಡ್ಜ್ ಬಳಿ ಮಟ್ಕಾ ಜುಗಾರಿ ಆಡುತ್ತಿದ್ದ ಸ್ಥಳಕ್ಕೆ ಪೊಲೀಸರು ದಾಳಿ ನಡೆಸಿ ಪ್ರಕರಣ ದಾಖಲಿಸಿದ್ದಾರೆ.
ಹೆಬ್ರಿ ಪೊಲೀಸ್ ಠಾಣೆಯ ಸಹಾಯಕ ಪೊಲೀಸ್ ಉಪನಿರೀಕ್ಷಕರಾದ ಪ್ರೀತಂಕುಮಾರ್ ಪಯಾಸ್ ಅವರಿಗೆ ಬಂದ ಖಚಿತ ಮಾಹಿತಿ ಮೇರೆಗೆ ಅ.27 ರಂದು ದಾಳಿ ನಡೆಸಿದಾಗ ವಿಜಯಲಕ್ಮೀ ಬಾರ್ ಎಂಡ್ ರೆಸ್ಟೊರೆಂಟ್ ಮತ್ತು ಲಾಡ್ಜ್ ಎದುರು ರಸ್ತೆಯ ಬದಿಯಲ್ಲಿ ಪುತ್ತೂರಿನ ಚೇತನ (24) ಎಂಬಾತ ಮಟ್ಕಾ ಜುಗಾರಿ ಆಟ ನಡೆಸುತ್ತಿದ್ದು, ಆತನ ಬಳಿ ಇದ್ದ ಮಟ್ಕಾ ಜುಗಾರಿ ಆಟದಿಂದ ಸಂಗ್ರಹಿಸಿದ ನಗದು ಸಹಿತ ಇನ್ನಿತರ ವಸ್ತುಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ.





