
ಬೆಂಗಳೂರು, ಅ.28: ಹಣ ಹಾಗೂ ಅಧಿಕಾರದ ದುರುಪಯೋಗದ ಗಂಭೀರ ಆರೋಪ ಕೇಳಿಬಂದ ಹಿನ್ನಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಆಡಳಿತ ಸಮಿಯನ್ನು ವಜಾಗೊಳಿಸಿದ ರಾಜ್ಯ ಸರ್ಕಾರ ಕಸಾಪಗೆ ಆಡಳಿತಾಧಿಕಾರಿಯಾಗಿ ಐಎಎಸ್ ಅಧಿಕಾರಿ ಕೆ.ಎಂ ಗಾಯತ್ರಿ ಅವರನ್ನು ನೇಮಕ ಮಾಡಿ ಆದೇಶಿಸಿದೆ.
ಈ ಕುರಿತಂತೆ ಸಹಕಾರ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕಿ ಐಎಎಸ್ ಅಧಿಕಾರಿ ಕೆ.ಎಂ ಗಾಯತ್ರಿ ಅವರನ್ನು ಮುಂದಿನ ಮೂರು ತಿಂಗಳ ಅವಧಿಗೆ ಅಥವಾ ಕಲಂ 25ರ ವಿಚಾರಣೆ ಪೂರ್ಣಗೊಳ್ಳುವವರೆಗೆ ಆಡಳಿತಾಧಿಕಾರಿಯಾಗಿ ನೇಮಿಸಿ ಆದೇಶಿಸಿದ್ದಾರೆ.
ಹೈ ಕೋರ್ಟ್ ನಲ್ಲಿ ಸಲ್ಲಿಕೆಯಾದ ರಿಟ್ ಅರ್ಜಿಯ ಅನುಸಾರ ನೀಡಿರುವ ಮಧ್ಯಂತರ ಆದೇಶದಂತೆ ನ್ಯಾಯಾಲಯದ ಗಮನಕ್ಕೆ ತಂದು ನ್ಯಾಯಾಲಯವು ನೀಡುವ ನಿರ್ದೇಶನದ ನಂತರ ಈ ಆದೇಶವನ್ನು ಅನುಷ್ಠಾನಗೊಳಿಸುವುದು. ಈ ಪ್ರಕರಣದಲ್ಲಿ ಹೈಕೋರ್ಟ್ ನೀಡುವ ನಿರ್ದೇಶನದಂತೆ ಆಡಳಿತಾಧಿಕಾರಿಯು ಸಂಘದ ಪ್ರಭಾರ ಅಧಿಕಾರ ವಹಿಸಿ ಕರ್ನಾಟಕ ಸಂಘಗಳ ನೋಂದಣಿ ಕಾಯ್ದೆ 1960ರ ಕಲಂ 25ರ ವಿಚಾರಣೆಗೆ ಸಂಬAಧಿಸಿದAತೆ ಅಗತ್ಯ ಮಾಹಿತಿ ಮತ್ತು ದಾಖಲೆಗಳನ್ನು ತ್ವರಿತವಾಗಿ ವಿಚಾರಣಾಧಿಕಾರಿಗಳಿಗೆ ಒದಗಿಸುವಂತೆ ಸೂಚಿಸಲಾಗಿದೆ.





