
ಹೆಬ್ರಿ: ಬೈಕಿನಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಮುದ್ರಾಡಿಯ ಹರೀಶ(45) ಮೃತಪಟ್ಟ ದುರ್ದೈವಿ.
ಹರೀಶ ಅವರು ಅ.25 ರಂದು ಬೈಕಿನಲ್ಲಿ ಹೋಗುತ್ತಿದ್ದಾಗ ರಾತ್ರಿ ಮುದ್ರಾಡಿ ರಿಕ್ಷಾ ನಿಲ್ದಾಣ ಬಳಿಯ ಬ್ಯಾರಿಕೇಡ್ ಗೆ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದರು.
ಅವರಿಗೆ ಹೆಬ್ರಿ ಸಮುದಾಯ ಆರೋಗ್ಯ ಕೇಂದ್ರ ಬಳಿಕ ಅಕ್ಜರಕಾಡು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಹರೀಶ ಅ.27 ರಂದು ರಾತ್ರಿ ಮೃತಪಟ್ಟಿದ್ದಾರೆ.
ಈ ಕುರಿತು ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





