
ಕಾರ್ಕಳ: ಜಿಲ್ಲಾ ಪಂಚಾಯತ್ ಉಡುಪಿ,ಉಪನಿರ್ದೇಶಕರ ಕಛೇರಿ, ಶಾಲಾ ಶಿಕ್ಷಣ ಇಲಾಖೆ, ಮಣಿಪಾಲ, ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ಅ. 29 ರಂದು ಒಳಕಾಡು ಪ್ರೌಢಶಾಲೆ ಯಲ್ಲಿ ನಡೆದ 2025-26ನೇ ಸಾಲಿನ ಜಿಲ್ಲಾ ಮಟ್ಟದ ಗ್ರಾಮೀಣ ರಸಪ್ರಶ್ನೆ ಸ್ಪರ್ದೆಯಲ್ಲಿ ಅಜೆಕಾರು ಚರ್ಚ್ ಆಂಗ್ಲ ಮಾಧ್ಯಮ ಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ಅವನಿ ಆರ್ ಶೆಟ್ಟಿ ವಿಜೇತಳಾಗಿ ಮೈಸೂರಿನಲ್ಲಿ ನಡೆಯುವ ವಿಭಾಗ ಮಟ್ಟದ ಸ್ಪರ್ಧೆಗೆ ಆಯ್ಕೆ ಯಾಗಿದ್ದಾರೆ.
ಸಾಧನೆಗೈದ ವಿದ್ಯಾರ್ಥಿನಿಗೆ ಶಾಲಾ ಸಂಚಾಲಕರಾದ ವಂದನೀಯ ಗುರು ಹೆನ್ರಿ ಮಸ್ಕರೇನಸ್, ಮುಖ್ಯ ಶಿಕ್ಷಕಿ,ಶ್ರೀಮತಿ ರೇಷ್ಮಾ ಶೀಲಾ ರೋಡ್ರಿಗಸ್, ಶಿಕ್ಷಕ -ಶಿಕ್ಷಕೇತರ ವರ್ಗದವರು, ಪೋಷಕ ಪ್ರತಿನಿಧಿ ಹಾಗೂ ಪೋಷಕವರ್ಗದವರು ಅಭಿನಂದಿಸಿ ಶುಭ ಹಾರೈಸಿದ್ದಾರೆ.




