
ಬೆಂಗಳೂರು, ಅಕ್ಟೋಬರ್ 30: 2025ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟವಾಗಿದ್ದು, ಬಹುಭಾಷಾ ನಟ ಪ್ರಕಾಶ್ ರಾಜ್ ಸೇರಿದಂತೆ ಒಟ್ಟು 70 ಜನ ಸಾಧಕರನ್ನು ಆಯ್ಕೆ ಮಾಡಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಿ ಇಂದು ಸುದ್ದಿಗೋಷ್ಠಿ ನಡೆಸಿ ಪ್ರಶಸ್ತಿಗೆ ಆಯ್ಕೆಯಾದವರ ಹೆಸರು ಪ್ರಕಟಿಸಿದ್ದು, ಇದೇ ಮೊದಲ ಬಾರಿಗೆ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಕರೆಯದೆ ಒಟ್ಟು 70 ಮಂದಿಯನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಪ್ರಶಸ್ತಿ ನೀಡಿಕೆಯಲ್ಲಿ ಜಿಲ್ಲಾವಾರು, ಸಾಮಾಜಿಕ ಪರಿಪಾಲನೆಯಡಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಆಯ್ಕೆ ಸಲಹಾ ಸಮಿತಿ ಸದಸ್ಯರು ಶಿಫಾರಸ್ಸು ಮಾಡಿದ್ದವರನ್ನು ಬಹುತೇಕ ಆಯ್ಕೆ ಮಾಡಲಾಗಿದ್ದು, ನಾಲ್ಕೈದು ಬಾರಿ ಸಭೆ ನಡೆಸಿದ ಸದಸ್ಯರು ಅರ್ಹರನ್ನು ಆಯ್ಕೆ ಮಾಡಲಾಗಿದೆ ಎಂದು ಶಿವಾರಜ್ ತಂಗಡಗಿ ತಿಳಿಸಿದರು.
ಮೊದಲೇ ನಿರ್ಧರಿಸಿದಂತೆ ಈ ಬಾರಿ ಯಾವುದೇ ಸಂಘ-ಸಂಸ್ಥೆಗಳಿಗೆ ಪ್ರಶಸ್ತಿ ನೀಡಿಲ್ಲ. ಈ ಬಾರಿ 12 ಮಂದಿ ಮಹಿಳೆಯರಿಗೆ ಈ ಬಾರಿ ಪ್ರಶಸ್ತಿ ಆಯ್ಕೆ ಮಾಡಲಾಗಿದೆ. ಇನ್ನು ನವಂಬರ್ 1ರಂದು ಸಂಜೆ 6 ಗಂಟೆಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದ್ದು, ಪ್ರಶಸ್ತಿಯು 5 ಲಕ್ಷ ನಗದು, 25ಗ್ರಾಂ ಚಿನ್ನದ ಪದಕ ಪ್ರಶಸ್ತಿ ಫಲಕವನ್ನು ರಾಜ್ಯೋತ್ಸವ ಪ್ರಶಸ್ತಿ ಒಳಗೊಂಡಿದೆ.




