
ಬೆಂಗಳೂರು, ನ. 5: ಈ ಬಾರಿಯ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳ ಅಂತಿಮ ವೇಳಾಪಟ್ಟಿ ಪ್ರಕಟವಾಗಿದ್ದು, SSLC, ದ್ವಿತೀಯ PU ಪರೀಕ್ಷೆ-1 ಮತ್ತು 2ರ ಅಂತಿಮ ವೇಳಾಪಟ್ಟಿಯನ್ನು ಅಂತಿಮಗೊಳಿಸಿ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ (ನವೆಂಬರ್ 05) ಪ್ರಕಟಿಸಿದೆ. ಎಸ್ಎಸ್ಎಲ್ಸಿ ಪರೀಕ್ಷೆ-1 ಮಾರ್ಚ್ 18ರಿಂದ ಏಪ್ರಿಲ್ 2ರವರೆಗೆ ನಡೆಯುಲಿದ್ದು, ಪಿಯುಸಿ ಪರೀಕ್ಷೆ-1ರ ಪರೀಕ್ಷೆಗಳು 2026ರ ಫೆಬ್ರವರಿ 28ರಿಂದ ಮಾರ್ಚ್ 17ರ ವರೆಗೆ ನಡೆಯಲಿ. ಹಾಗೂ ಪಿಯುಸಿ ಪರೀಕ್ಷೆ-2 ಏಪ್ರಿಲ್ 25ರಿಂದ ಮೇ9ರವರೆಗೂ ನಡೆಯಲಿವೆ.
2026ನೇ ಸಾಲಿನ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿ.ಯು.ಸಿ. ಪರೀಕ್ಷೆ-1 ಮತ್ತು ಪರೀಕ್ಷೆ-2 ರ ಅಂತಿಮ ವೇಳಾಪಟ್ಟಿಯನ್ನು ಮಂಡಳಿಯ ಜಾಲತಾಣದಲ್ಲಿ (ನವೆಂಬರ್ 05) ಪ್ರಕಟಿಸಲಾಗಿದೆ. ರಾಜ್ಯದ ಎಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರುಗಳು ಹಾಗೂ ಪ್ರೌಢಶಾಲಾ ಮುಖ್ಯ ಶಿಕ್ಷಕರು ತಮ್ಮ ಶಾಲಾ, ಕಾಲೇಜುಗಳ ಪ್ರಕಟಣಾ ಫಲಕದಲ್ಲಿ (ನೋಟಿಸ್ ಬೋರ್ಡ್) ವೇಳಾಪಟ್ಟಿಯನ್ನು ಪ್ರಕಟಿಸಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲು ತಿಳಿಸಿದೆ ಪರೀಕ್ಷಾ ಮಂಡಳಿ ತಿಳಿಸಿದೆ.
2026ರ ಮಾರ್ಚ್ 18ರಿಂದ ಏ.2ರವರೆಗೆ SSLC ಪರೀಕ್ಷೆ-1.
ಮೇ 18ರಿಂದ ಮೇ 25ವರೆಗೆ ನಡೆಯಲಿದೆ. SSLC ಪರೀಕ್ಷೆ-2
ಫೆಬ್ರವರಿ 28ರಿಂದ ಮಾರ್ಚ್ 17ವರೆಗೆ ದ್ವೀತಿಯ PUC ಪರೀಕ್ಷೆ-1
ಏಪ್ರಿಲ್ 25ರಿಂದ ಮೇ 9ರವರೆಗೆ ದ್ವೀತಿಯ PUC ಪರೀಕ್ಷೆ-2 ನಡೆಯಲಿದೆ.


