
ನವದೆಹಲಿ, ನ,10 : ಲೋಕಸಭೆ ಮತ್ತು ಆಯಾ ರಾಜ್ಯಗಳ ಶಾಸಕಾಂಗ ಸಭೆಗಳಲ್ಲಿ (ವಿಧಾನಸಭೆ) ಮಹಿಳೆಯರಿಗೆ ಮೀಸಲಾತಿ ನೀಡುವ ವಿಚಾರದಲ್ಲಿ ಕೇಂದ್ರ ಮತ್ತು ಎಲ್ಲಾ ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದ್ದು, ನಾಲ್ಕು ವಾರಗಳಲ್ಲಿ ಉತ್ತರಿಸುವಂತೆ ಸೂಚಿಸಿದೆ.
ರಾಜಕೀಯ ಕ್ಷೇತ್ರದಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ನೀಡಬೇಕೆಂಬ ಬೇಡಿಕೆಯಾಗಿದೆ. ಈ ನಿಟ್ಟಿನಲ್ಲಿ, ಲೋಕಸಭೆ ಮತ್ತು ಶಾಸಕಾಂಗ ಸಭೆಗಳಲ್ಲಿ ಮೀಸಲಾತಿ ಒದಗಿಸಲು ಸರ್ಕಾರ 2023ರಲ್ಲಿ 106ನೇ ಸಾಂವಿಧಾನಿಕ ತಿದ್ದುಪಡಿಯನ್ನು ಜಾರಿಗೆ ತಂದಿತು. ಆದರೆ ಹೊಸ ಜನಗಣತಿ ಮತ್ತು ನಂತರದ ಡಿಲಿಮಿಟೇಶನ್ ಪೂರ್ಣಗೊಂಡ ನಂತರವೇ ಈ ಮೀಸಲಾತಿಯನ್ನು ಜಾರಿಗೆ ತರಲಾಗುತ್ತದೆ. ಇದೇ ಕಾರಣಕ್ಕಾಗಿ ಸರ್ಕಾರದ ಈ ತಿದ್ದುಪಡಿಯನ್ನು ಪ್ರಶ್ನಿಸಲಾಗಿದೆ.

