Share this news

ನವದೆಹಲಿ, ನ.12: ದೆಹಲಿಯಲ್ಲಿ ನ. 10ರಂದು ಭೀಕರ ಬಾಂಬ್ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ 10ಕ್ಕೂ ಅಧಿಕ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಪ್ರಕರಣದ ತನಿಖೆ ಕೈಗೆತ್ತಿಕೊಂಡಿರುವ ಎನ್ಐಎ ಇಬ್ಬರು ಶಂಕಿತರ ವಿಚಾರಣೆ ನಡೆಸುವಾಗ ಜನವರಿ 26ರಂದು ಗಣರಾಜ್ಯೋತ್ಸವದ ದಿನ ಕೆಂಉಕೋಟೆಯನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವುದು ಉಗ್ರರ ಯೋಜನೆಯಾಗಿತ್ತು ಎಂಬ ಸ್ಫೋಟಕ ಮಾಹಿತಿ ಬಯಲಾಗಿದೆ.

ದೆಹಲಿ ಸ್ಫೋಟ ಪ್ರಕರಣದಲ್ಲಿ ಪ್ರಮುಖ ಆರೋಪಿ ಮುಜಮ್ಮಿಲ್ ತನಿಖಾಧಿಕಾರಿಗಳಿಗೆ ತಿಳಿಸಿರುವ ಪ್ರಕಾರ, ಆ ಪ್ರದೇಶದಲ್ಲಿ ನಡೆದ ಸ್ಫೋಟಕ್ಕೂ ಮೊದಲು ತಾನು ಮತ್ತು ಉಮರ್ ಕೆಂಪು ಕೋಟೆಯಿಂದ ಹಿಂದಿರುಗಿ ಬಂದಿದ್ದೆವು. ಮೊದಲು ಕೆಂಪುಕೋಟೆಯನ್ನು ಗುರಿಯಾಗಿಸಿ ದಾಳಿ ಮಾಡುವ ಯೋಜನೆಯಿತ್ತು ಹಾಗಾಗಿ ಹಲವು ಬಾರಿ ಕೆಂಪು ಕೋಟೆಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಓಡಾಡಿದ್ದೆವು ಎಂದು ತಿಳಿಸಿದ್ದಾನೆ.
ದೀಪಾವಳಿಯಂದು ಜನದಟ್ಟಣೆ ಇರುವ ಸ್ಥಳದ ಮೇಲೆ ದಾಳಿ ಮಾಡುವ ಯೋಜನೆಯಿತ್ತು ಆದರೆ ಅದನ್ನು ಕಾರ್ಯಗತಗೊಳಿಸಲು ಸಾಧ್ಯವಾಗಲಿಲ್ಲ ಎಂದು ಮೂಲಗಳು ತಿಳಿಸಿವೆ.

ನಂತರ ಬಂಧನಕ್ಕೆ ಹೆದರಿ, ಬಾಂಬ್ ಸ್ಫೋಟದಲ್ಲಿ ಸಾವನ್ನಪ್ಪಿದ ಭಯೋತ್ಪಾದಕ ಡಾ. ಮೊಹಮ್ಮದ್ ಉಮರ್ ಈ ಯೋಜನೆಯನ್ನು ರೂಪಿಸಿ ಕೆಂಪು ಕೋಟೆಯ ಬಳಿ ಸ್ಫೋಟ ನಡೆಸಿದ್ದಾನೆ.ಅತ್ಯಂತ ಆಶ್ಚರ್ಯಕರ ವಿಷಯವೆಂದರೆ ಘಟನೆ ನಡೆದ 24 ಗಂಟೆಗಳ ನಂತರವೂ ಯಾವುದೇ ಭಯೋತ್ಪಾದಕ ಸಂಘಟನೆಯು ಇದರ ಹೊಣೆಯನ್ನು ಹೊತ್ತುಕೊಂಡಿಲ್ಲ.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Leave a Reply

Your email address will not be published. Required fields are marked *