Share this news

ಕಾರ್ಕಳ : ನಲ್ಲೂರಿನಲ್ಲಿ ನಡೆದಿರುವ ಅಕ್ರಮ ಹಾಗೂ ವ್ಯವಸ್ಥಿತ ಗೋಹತ್ಯೆ ದಂಧೆಯ ಆರೋಪಿಗಳನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆಯನ್ನು ವಿಧಿಸಬೇಕು ಎಂದು ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್ ಆಗ್ರಹಿಸಿದ್ದಾರೆ.

ಪ್ರತಿ ಬಾರಿ ಗೋ ರಕ್ಷಣೆಯ ಕಾರ್ಯ ಮಾಡುವ ಹಿಂದೂ ಸಂಘಟನೆಗಳ ಕಾರ್ಯಕರ್ತರ ಮೇಲೆಯೇ ಪ್ರಕರಣ ದಾಖಲಿಸಲಾಗುತ್ತದೆ. ಆದರೆ ವಾಸ್ತವದಲ್ಲಿ, ಇಂತಹ ಅಕ್ರಮ ಗೋ ಹತ್ಯೆ ದಂಧೆಗಳನ್ನು, ಅಕ್ರಮ ಕಸಾಯಿಖಾನೆಗಳನ್ನು ಪತ್ತೆ ಹಚ್ಚಿ ಬಯಲು ಮಾಡುವುದು ನಮ್ಮ ಹಿಂದೂ ಕಾರ್ಯಕರ್ತರೇ ಎನ್ನುವುದನ್ನು ನಾವು ಗಮನಿಸಬೇಕಾದ ಅಂಶ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತದಲ್ಲಿದೆ ಎನ್ನುವ ಭರವಸೆಯಿಂದ, ಆರೋಪಿಗಳು ಕಾನೂನಿನ ಭಯವಿಲ್ಲದೆ ಇಷ್ಟು ರಾಜಾರೋಷವಾಗಿ ತನ್ನ ಮನೆಯಲ್ಲಿಯೇ ಅಕ್ರಮ ಗೋ ಮಾಂಸ ವ್ಯಾಪಾರ ಮಾಡುವ ದಂಧೆಯನ್ನು ನಡೆಸುತ್ತಿದ್ದರು. ಇಂತಹ ಅಕ್ರಮ ಗೋ ಮಾಂಸ ದಂಧೆಗಳಿಂದಲೇ ಗೋ ಕಳ್ಳತನ ಎಗ್ಗಿಲ್ಲದೆ ನಡೆಯುತ್ತಿರುವುದು. ಇಂತಹ ಅಕ್ರಮ ದಂಧೆಗಳನ್ನು ಮಟ್ಟಹಾಕಿದರೆ ಗೋ ಕಳ್ಳತನವು ತನ್ನಿಂದ ತಾನೇ ನಿಯಂತ್ರಣಕ್ಕೆ ಬರುತ್ತದೆ ಎಂದು ಅವರು ಹೇಳಿದ್ದಾರೆ.

ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಯಾವುದೇ ರಾಜಕೀಯ ಒತ್ತಡಕ್ಕೆ ಮಣಿಯದೆ ಆರೋಪಿಗಳ ಹೆಡೆಮುರಿಕಟ್ಟಬೇಕು. ಪೊಲೀಸ್ ಇಲಾಖೆ ಇನ್ನಷ್ಟು ಚುರುಕಾಗಿ ಕಾರ್ಕಳದಾದ್ಯಂತ ಇರುವ ಅಕ್ರಮ ಕಸಾಯಿಖಾನೆಗಳನ್ನು ಶೀಘ್ರವೇ ಪತ್ತೆ ಹಚ್ಚಿ ಅಕ್ರಮ ದಂಧೆಕೋರರನ್ನು ಬಂಧಿಸಿ, ಅಕ್ರಮ ಕಸಾಯಿಖಾನೆಗಳನ್ನು ವಶಕ್ಕೆ ಪಡೆದು ಆರೋಪಿಗಳ ಆಸ್ತಿಯನ್ನು ಮುಟ್ಟುಗೋಲು ಹಾಕಬೇಕು ಎಂದು ನವೀನ್ ನಾಯಕ್ ಒತ್ತಾಯಿಸಿದ್ದಾರೆ.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Leave a Reply

Your email address will not be published. Required fields are marked *