Share this news

ಬೆಂಗಳೂರುನ,12 : ಧರ್ಮಸ್ಥಳದಲ್ಲಿ ನೂರಾರು ಮೃತದೇಹಗಳನ್ನು ಹೂತಿಟ್ಟಿದ್ದಾರೆ ಎನ್ನಲಾದ ಪ್ರಕರಣದ ಬಗ್ಗೆ ವಿಶೇಷ ತನಿಖಾ ತಂಡ ನಡೆಸುತ್ತಿದ್ದ ತನಿಖೆಗೆ ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಹೈಕೋರ್ಟ್ ತೆರವುಗೊಳಿಸಿದೆ. ಈ ಆದೇಶದಿಂದ ಪ್ರಕರಣದಲ್ಲಿ ಎಸ್‌ಐಟಿ ತನಿಖೆ ಮುಂದುವರೆಯಲಿದ್ದು, ಪಿತೂರಿ ನಡೆಸಿದ ಆರೋಪ ಎದುರಿಸುತ್ತಿದ್ದ ವಿಠಲಗೌಡ, ಗಿರೀಶ್ ಮಟ್ಟಣ್ಣವರ್, ಮಹೇಶ್ ತಿಮರೋಡಿ ಮತ್ತು ಟಿ. ಜಯಂತ್ ಅವರು ಎಸ್‌ಐಟಿ ಮುಂದೆ ವಿಚಾರಣೆಗೆ ಹಾಜರಾಗಬೇಕಾದ ಅನಿವಾರ್ಯತೆ ಎದುರಾಗಿದೆ.

ವಿಚಾರಣೆ ವೇಳೆ, ಸರ್ಕಾರದ ಪರ ವಕೀಲರು, ಅರ್ಜಿದಾರರಿಗೆ ಈ ಹಿಂದೆ ಹಲವು ಬಾರಿ ನೋಟಿಸ್ ನೀಡಿರುವುದು 150 ತಾಸು ವಿಚಾರಣೆ ನಡೆಸುವುದಾಗಿ ತಿಳಿಸಿದ್ದಾರೆ. ಆದರೆ, ಆ ನೋಟಿಸ್ ಮತ್ತು ವಿಚಾರಣೆ ನಡೆಸಿರುವ ಸಂದರ್ಭದಲ್ಲಿ ಅರ್ಜಿದಾರರನ್ನು ಸಾಕ್ಷಿಗಳನ್ನಾಗಿ ಪರಿಗಣಿಸಲಾಗಿತ್ತು. ಇದೀಗ ಅರ್ಜಿದಾರರನ್ನು ಆರೋಪಿಗಳನ್ನಾಗಿ ಪರಿಗಣಿಸಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ ಎಂದು ಪೀಠಕ್ಕೆ ವಿವರಿಸಿದರು. ವಾದ ಆಲಿಸಿದ ಪೀಠ, ತಡೆಯಾಜ್ಞೆ ತೆರವುಗೊಳಿಸಿ ವಿಚಾರಣೆಯನ್ನು ಮುಂದೂಡಿತು.

ಎಸ್‌ಐಟಿ ಪರ ವಕೀಲರು, ಅರ್ಜಿದಾರರ ಪ್ರಚೋದನೆ ಮೇಲೆಯೇ ಚಿನ್ನಯ್ಯ ದೂರು ನೀಡಿದ್ದಾನೆ. ನಂತರ 164ರ ಅಡಿ ಹೇಳಿಕೆ ನೀಡಿ ಅರ್ಜಿದಾರರ ಮೇಲೆ ಆರೋಪ ಮಾಡಿದ್ದಾರೆ. ಆರಂಭದಲ್ಲಿ ಸಾಕ್ಷಿಗಳಾಗಿ ಅರ್ಜಿದಾರರ ಪ್ರಚೋದನೆ ನಡೆಸಲಾಗಿತ್ತು. ಧರ್ಮಸ್ಥಳ ಗ್ರಾಮದ 20 ಕಡೆ ಅಗೆದು ಪರಿಶೀಲನೆ ನಡೆಸಲಾಯಿತು. ಆನಂತರ ಆರೋಪ ಬಹುತೇಕ ಸುಳ್ಳೆಂದು ದೃಢಪಟ್ಟ ಹಿನ್ನೆಲೆಯಲ್ಲಿ ದೂರುದಾರರನ್ನು ಆರೋಪಿಗಳನ್ನಾಗಿ ಮಾಡಿ ತನಿಖೆ ನಡೆಸುತ್ತಿದ್ದು, ವಿಚಾರಣೆಗೆ ಹಾಜರಾಗಲು ನೋಟಿಸ್ ಜಾರಿ ಮಾಡಲಾಗಿದೆ ಎಂದು ತಿಳಿಸಿದರು. ವಾದ ಆಲಿಸಿದ್ದ ನ್ಯಾಯಪೀಠ ಎಸ್‌ಐಟಿ ತನಿಖೆಗೆ ತಡೆ ನೀಡಿ ಆದೇಶಿಸಿತ್ತು.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Leave a Reply

Your email address will not be published. Required fields are marked *