
ಬೆಂಗಳೂರು: ರಾಜ್ಯದಲ್ಲಿ ವಿವಿಧ ಕಾರ್ಮಿಕ ಕಾಯ್ದೆಗಳಡಿ ನೋಂದಣಿಯಾಗಿರುವ ಉದ್ದಿಮೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ನೌಕರರಿಗೆ ಅವರ ಋತುಚಕ್ರದ ಸಮಯದಲ್ಲಿ ಮಾಸಿಕ ಒಂದು ದಿನದ ವೇತನ ಸಹಿತ ರಜೆ ಸೌಲಭ್ಯ ಒದಗಿಸಬೇಕು ಎಂದು ಕಾರ್ಮಿಕ ಇಲಾಖೆ ಆದೇಶ ಹೊರಡಿಸಿದೆ.
ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ, ತೋಟ ಕಾರ್ಮಿಕರ ಕಾಯ್ದೆ, ಬೀಡಿ ಮತ್ತು ಸಿಗಾರ್ ಕಾರ್ಮಿಕರ ಕಾಯ್ದೆ, ಮೋಟಾರು ಸಾರಿಗೆ ಕಾಯ್ದೆ ಅಡಿಯಲ್ಲಿ ನೋಂದಣಿ ಆಗಿರುವ ಕೈಗಾರಿಕೆಗಳು ಮತ್ತು ಸಂಸ್ಥೆಗಳೂ ಸೇರಿದಂತೆ ಎಲ್ಲ ವಲಯಗಳಲ್ಲಿ ಕೆಲಸ ಮಾಡುತ್ತಿರುವ 18ರಿಂದ 52ರ ವಯೋಮಾನದ ಎಲ್ಲ ಕಾಯಂ, ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರಿಗೆ ಈ ಸೌಲಭ್ಯ ನೀಡಬೇಕು ಎಂದು ಎಲ್ಲ ಉದ್ಯೋಗದಾತರಿಗೂ ಸೂಚಿಸಿದೆ.
ಈ ಸಂಬಂಧ ಸರ್ಕಾರ 2024ರ ಜನವರಿ 12ರಂದು ಅಧಿಸೂಚನೆ ಹೊರಡಿಸಿತ್ತು. ಜತೆಗೆ ಕಾರ್ಮಿಕ ಇಲಾಖೆ ಆಯುಕ್ತರು 21/02/2025ರಂದು ಪತ್ರ ಬರೆದಿದ್ದರು.ಬಳಿಕ 9/10/2025ರಂದು ನಡೆದ ರಾಜ್ಯ ಸರ್ಕಾರದ ಸಚಿವ ಸಂಪುಟ ಸಭೆಯಲ್ಲಿ ಇದಕ್ಕೆ ಅನುಮೋದನೆ ಕೂಡ ನೀಡಲಾಗಿತ್ತು.

