Share this news

ಹರಿಯಾಣ, ನ.18:ದೆಹಲಿಯಲ್ಲಿ ನವೆಂಬರ್ 10ರಂದು ನಡೆದ ಕಾರು ಸ್ಫೋಟ ಪ್ರಕರಣದ ತನಿಖೆಗೆ ಇದೀಗ ಇಡಿ ಎಂಟ್ರಿಯಾಗಿದ್ದು, ಇಂದು ಈ ಘಟನೆಯೊಂದಿಗೆ  ಸಂಬಂಧ ಹೊಂದಿದೆ ಎನ್ನಲಾದ ಅಲ್-ಫಲಾಹ್ ವಿಶ್ವವಿದ್ಯಾಲಯಕ್ಕೆ ಸಂಬಂಧಿಸಿದ 25 ಕಡೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹರಿಯಾಣ ಮೂಲದ ಅಲ್-ಫಲಾಹ್ ವಿಶ್ವವಿದ್ಯಾಲಯಕ್ಕೆ ಸಂಬಂಧಿಸಿದ ಹಣಕಾಸಿನ ಜಾಲದ ಬಗ್ಗೆ ಇಡಿ ತನಿಖೆ ಆರಂಭಿಸಿದ್ದು, ದೆಹಲಿ-ಎನ್‌ಸಿಆರ್‌ನಲ್ಲಿ ಕನಿಷ್ಠ 25 ಸ್ಥಳಗಳ ಮೇಲೆ ದಾಳಿ ಮಾಡಿದೆ.

ಬೆಳಗ್ಗೆ 5 ಗಂಟೆಗೆ ಪ್ರಾರಂಭವಾದ ದಾಳಿಯು ವಿಶ್ವವಿದ್ಯಾಲಯದ ಟ್ರಸ್ಟಿಗಳು ಮತ್ತು ಸಂಬಂಧಿತ ವ್ಯಕ್ತಿಗಳಿಗೆ ಸಂಬಂಧಿಸಿದ ಜಾಗಗಳ ಮೇಲೆ ದಾಳಿ ನಡೆಯುತ್ತಿದೆ. ಬಂಧಿತ ಹಲವಾರು ಶಂಕಿತರು ವಿಶ್ವವಿದ್ಯಾಲಯದೊಂದಿಗೆ ನೇರ ಸಂಪರ್ಕವನ್ನು ಹೊಂದಿರುವುದು ದೃಢಪಟ್ಟಿದೆ.
ನವೆಂಬರ್ 10 ರಂದು ಕೆಂಪು ಕೋಟೆಯ ಬಳಿ ನಡೆದ ಕಾರ್ ಬಾಂಬ್ ದಾಳಿಯಲ್ಲಿ 115 ಜನರು ಸಾವನ್ನಪ್ಪಿದ್ದರು. ಹಲವಾರು ಶಂಕಿತರು ಈ ವಿಶ್ವವಿದ್ಯಾಲಯದೊಂದಿಗೆ ಸಂಪರ್ಕ ಹೊಂದಿದ್ದಾರೆ. ದೆಹಲಿ ಬಾಂಬ್ ದಾಳಿಯ ಪ್ರಮುಖ ಆರೋಪಿ ಡಾ. ಉಮರ್ ಉನ್ ನಬಿ ಅಲ್-ಫಲಾಹ್ ವಿಶ್ವವಿದ್ಯಾಲಯದಲ್ಲಿ ಕೆಲಸ ಮಾಡುತ್ತಿದ್ದ.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Leave a Reply

Your email address will not be published. Required fields are marked *