
ಉಡುಪಿ : ಮಿಯ್ಯಾರು ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳ ಜನಿವಾರ ಮತ್ತು ಕೈದಾರ(ರಕ್ಷಾಸೂತ್ರ)ಗಳನ್ನು ಬಲವಂತವಾಗಿ ತೆಗೆಸಿ ದೈಹಿಕ ಶಿಕ್ಷೆ ನೀಡಿರುವ ಶಿಕ್ಷಕ ಮದಸರಾ ಎಸ್ ಮಕಾಂದರ್ ನನ್ನು ಈಗಾಗಲೇ ಕರ್ತವ್ಯದಿಂದ ವಜಾಗೊಳಿಸಿ, ಆತನ ವಿರುದ್ಧ FIR ದಾಖಲಿಸಲಾಗಿದೆ.
ಇಂತಹ ಹೀನ ಕೃತ್ಯ ಎಸಗಿದ ಶಿಕ್ಷಕನ ಮೇಲೆ ಮಕ್ಕಳ ಹಕ್ಕುಗಳ ಸಂರಕ್ಷಣಾ ಅಧಿನಿಯಮಗಳ ಉಲ್ಲಂಘನೆ ಎಂದು ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ತಾಲೂಕು ಶಿಕ್ಷಣ ಇಲಾಖೆಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಹಿಂದೂ ಜನಜಾಗೃತಿ ಸಮಿತಿಯ ಜಿಲ್ಲಾ ವಕ್ತಾರರಾದ ಬಾಲಕೃಷ್ಣ ನಾಯಕ್, ಸಮಿತಿಯ ಕಾರ್ಯಕರ್ತರು ಹಾಗೂ ಅನೇಕ ಧರ್ಮ ಪ್ರೇಮಿಗಳು ಭಾಗಿಯಾಗಿದ್ದರು.

