Share this news

ಕಾರ್ಕಳ, ನ.20: ಪುರಸಭೆ ವ್ಯಾಪ್ತಿಯಲ್ಲಿನ ಬಹುತೇಕ ಎಲ್ಲಾ ರಸ್ತೆಗಳು ಹದಗೆಟ್ಟಿದ್ದು, ಇದರಿಂದ ವಾಹನಗಳ ಸಂಚಾರಕ್ಕೆ ತೀವ್ರ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣವೇ ರಸ್ತೆಯನ್ನು ದುರಸ್ತಿಪಡಿಸುವಂತೆ ಕಾರ್ಕಳ ತಾಲೂಕು ಆಟೋ ರಿಕ್ಷಾ ಚಾಲಕ- ಮಾಲಕರ ಸಂಘದ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ ತಿಳಿಸಿದರು.
ಅವರು ಗುರುವಾರ ಕಾರ್ಕಳ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಕಾರ್ಕಳ ಪುರಸಭೆ ವ್ಯಾಪ್ತಿಯಲ್ಲಿ ಸುಮಾರು 850 ರಿಕ್ಷಾಗಳು ಸಂಚರಿಸುತ್ತಿದ್ದು, ಕಾರ್ಕಳದ ಪುರಸಭೆಯ ರಸ್ತೆಗಳು ಹೊಂಡಗುಂಡಿಗಳಿಂದ ತುಂಬಿಹೋಗಿದ್ದು, ವಾಹನಗಳು ಓಡಾಡದ ಪರಿಸ್ಥಿತಿ ನಿರ್ಮಾಣವಾಗಿದೆ. ತೀರಾ ಹದಗೆಟ್ಟ ರಸ್ತೆಯಲ್ಲೇ ರಿಕ್ಷಾಗಳು ಓಡಾಟ ನಡೆಸುತ್ತಿದ್ದು, ಬಂದ ಬಾಡಿಗೆ ಹಣದಿಂದ ರಿಕ್ಷಾ ದುರಸ್ತಿಯ ಜೊತೆಗೆ ಕುಟುಂಬದ ಜೀವನ ನಿರ್ವಹಣೆ ಕಷ್ಟವಾಗುತ್ತಿದೆ.ಆದ್ದರಿಂದ ಪುರಸಭೆ ಆಡಳಿತ ತಕ್ಷಣವೇ ರಸ್ತೆ ಹೊಂಡಗುಂಡಿಗಳನ್ನು ಮುಚ್ಚುವಂತೆ ಬಾಲಕೃಷ್ಣ ಶೆಟ್ಟಿ ಆಗ್ರಹಿಸಿದ್ದಾರೆ.
ಈ ಸಂದರ್ಭದಲ್ಲಿ ಉಪಾಧ್ಯಕ್ಷ ವಿಶ್ವನಾಥ ಭಂಡಾರಿ,ಪ್ರಧಾನ ಕಾರ್ಯದರ್ಶಿ ಅಣ್ಣಿ ಮಡಿವಾಳ,ಕಾರ್ಯದರ್ಶಿ ಹರೀಶ್ ದೇವಾಡಿಗ, ಕೋಶಾಧಿಕಾರಿ ಅರುಣ್ ಕಿಣಿ, ಸಂಘಟನಾ ಕಾರ್ಯದರ್ಶಿ ಸಂತೋಷ್ ರಾವ್ ಉಪಸ್ಥಿತರಿದ್ದರು.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Leave a Reply

Your email address will not be published. Required fields are marked *