
ಕಾರ್ಕಳ, ನ.20: ಬಸ್ ಹಾಗೂ ರಿಕ್ಷಾ ನಡುವೆ ಮುಖಾಮುಖಿ ಡಿಕ್ಕಿಯಾಗಿ ರಿಕ್ಷಾ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾದ ಘಟನೆ ನಡೆದಿದೆ.
ಕಾರ್ಕಳ ಪೇಟೆಯ ಉಚ್ಚಂಗಿ ಮಾರಿಯಮ್ಮ ದೇವಸ್ಥಾನದ ಬಳಿ ಸಿಂಡಿಕೇಟ್ ಬ್ಯಾಂಕ್ ಸಮೀಪ ಗುರುವಾರ ಮಧ್ಯಾಹ್ನ ಈ ಅಪಘಾತ ಸಂಭವಿಸಿದ್ದು,ಖಾಸಗಿ ಬಸ್ ಚಾಲಕನಿಗೆ ಹಠಾತ್ ರಕ್ತದೊತ್ತಡ ಕಡಿಮೆಯಾದ ಪರಿಣಾಮ ತಲೆಸುತ್ತು ಬಂದು ಬಸ್ ಚಾಲಕನ ನಿಯಂತ್ರಣ ತಪ್ಪಿ ಎದುರಿನಿಂದ ಬರುತ್ತಿದ್ದ ರಿಕ್ಷಾ ಗೆ ಡಿಕ್ಕಿಯಾಗಿದೆ.
ಈ ಅಪಘಾತದಲ್ಲಿ ರಿಕ್ಷಾ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅಪಘಾತ ನಡೆದ ಸ್ಥಳದಲ್ಲಿ ಜನಸಂದಣಿ ಇಲ್ಲದ್ದರಿಂದ ಭಾರೀ ಅನಾಹುತ ತಪ್ಪಿದಂತಾಗಿದೆ.

