
ಕಾರ್ಕಳ: ತಾಲೂಕಿನ ಸಾಣೂರು ಗ್ರಾಮದ ಮುರತ್ತಂಗಡಿ ಜಂಕ್ಷನ್ ಬಳಿ ಯುವತಿಗೆ ಬಸ್ ಡಿಕ್ಕಿಯಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಇರ್ವತ್ತೂರಿನ ನಂದಾ ಅತಿಕಾರಿ(18ವ) ಅವರು ನ.24 ರಂದು ಮಂಗಳೂರಿನಿಂದ ಬಂದು ರಸ್ತೆ ದಾಟಲೆಂದು ಮುರತ್ತಂಗಡಿ ಜಂಕ್ಷನ್ ಬಳಿ ನಿಂತಿದ್ದಾಗ ಮೂಡಬಿದ್ರೆ ಕಡೆಯಿಂದ ಬಂದ ಬಸ್ ಡಿಕ್ಕಿಯಾಗಿದೆ. ಅಪಘಾತದ ಪರಿಣಾಮ ನಂದಾ ಅವರು ರಸ್ತೆಗೆ ಬಿದ್ದು ಗಾಯಗೊಂಡಿದ್ದು, ಅವರಿಗೆ ಕಾರ್ಕಳ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಎಜೆ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಕುರಿತು ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
.
