Share this news

 

 

 

 

ಉಡುಪಿ,ನ, 27: ಸಿಎಂ ಕುರ್ಚಿ ಕಿತ್ತಾಟದಲ್ಲಿ ಕಳೆದ ಎರಡು ತಿಂಗಳಿAದ ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ಸಚಿವ ಸಂಪುಟದ ಶೇ. 90ರಷ್ಟು ಸಚಿವರು ವಿಧಾನಸೌಧಕ್ಕೆ ಬರುತ್ತಿಲ್ಲ. ಮುಖ್ಯಮಂತ್ರಿ ಮೈಸೂರಿಗೆ ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ಸೀಮಿತವಾಗಿದ್ದಾರೆ. ಅಧಿವೇಶನದಲ್ಲಿ ಅವಿಶ್ವಾಸ ಗೊತ್ತುವಳಿ ನಿರ್ಣಯ ಮಂಡಿಸುತ್ತೇವೆ. ಆದರೆ ಬಿಜೆಪಿ ಯಾವುದೇ ಕಾರಣಕ್ಕೂ ಸರ್ಕಾರ ರಚನೆಗೆ ಮುಂದಾಗುವ ಪ್ರಶ್ನೆಯೇ ಇಲ್ಲವೆಂದು ಬಿಜೆಪಿ ಶಾಸಕ ವಿ ಸುನಿಲ್ ಕುಮಾರ್ ತಿಳಿಸಿದರು.
ಅವರು ಉಡುಪಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ಕಾಂಗ್ರೆಸ್ ಸರ್ಕಾರ ಸಂಪೂರ್ಣವಾಗಿ ಜನರ ವಿಶ್ವಾಸವನ್ನು ಕಳೆದುಕೊಂಡಿದೆ. ಸಿಎಂ ಡಿಸಿಎಂ ಮತ್ತು ಮಂತ್ರಿಗಳು ಶಾಸಕರ ನಡುವೆ ಪರಸ್ಪರ ವಿಶ್ವಾಸವಿಲ್ಲ. ಸದನದಲ್ಲಿ ವಿಶ್ವಾಸ ಮತ ಯಾಚಿಸುತ್ತೇವೆ. ಎನ್‌ಡಿಎ ಒಕ್ಕೂಟದಲ್ಲೂ ಈ ಬಗ್ಗೆ ಮಾತುಕತೆ ಮಾಡುತ್ತೇವೆ. ರಾಜ್ಯದ ಹಿತ ಮರೆತಿರುವ ಸರ್ಕಾರದ ಬಣ್ಣ ಬಯಲಿಗೆ ಎಳೆಯುತ್ತೇವೆ. ಸಿಎಂ,ಡಿಸಿಎಂಗಳು ತಮ್ಮ ಕುರ್ಚಿ ಉಳಿಸಿಕೊಳ್ಳಲು ಸ್ವಾಮೀಜಿಗಳಿಂದ ಹೇಳಿಕೆ ಕೊಡಿಸುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ರಾಜ್ಯದಲ್ಲಿ ಗೊಂದಲದ ವಾತಾವರಣವನ್ನು ಸೃಷ್ಟಿ ಮಾಡಿದ್ದಾರೆ.ಒಂದುಕಡೆ ದಲಿತ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕಡೆಗಣಿಸಲಾಗಿದೆ ಎಂದು ಕಾಂಗ್ರೆಸ್ ಶಾಸಕರೇ ಹೇಳುತ್ತಿದ್ದಾರೆ. ಇಂತಹ ಅಸ್ಥಿರತೆಯ ನಡುವೆ ಬಿಜೆಪಿ ಯಾವುದೇ ಕಾರಣಕ್ಕೂ ಸರ್ಕಾರ ರಚಿಸಲು ಮುಂದಾಗಲ್ಲ, ಕಾಂಗ್ರೆಸ್ ಸರ್ಕಾರ ತನ್ನ ಭಾರದಿಂದಲೇ ಕುಸಿದು ಬೀಳಲಿದೆ ಎಂದು ಶಾಸಕ ವಿ ಸುನಿಲ್ ಕುಮಾರ್ ಹೇಳಿದರು.

    

   

             

     

             

           
   

 

 

   

             

     

             

       
   

  .      

   

             

     

             

           
   

 

 

   

             

     

             

       
   

                

   

             

     

             

           
   

 

 

   

             

     

             

       
   

 

Leave a Reply

Your email address will not be published. Required fields are marked *