Share this news

ನವದೆಹಲಿ,ಡಿ,10: ಕಳೆದ 2023ರ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ವರುಣಾ ಹಾಗೂ ಚಿತ್ತಾಪುರ ಕ್ಷೆತ್ರದಲ್ಲಿ ಅಕ್ರಮ ಎಸಗಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಸಿಎಂ ಸಿದ್ಧರಾಮಯ್ಯ ಹಾಗೂ ಚಿತ್ತಾಪುರ ಕ್ಷೇತ್ರದ ಶಾಸಕ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಚುನಾವಣಾ ಆಯೋಗಕ್ಕೆ ಸುಪ್ರಿಂ ಕೋರ್ಟ್ ಸೋಮವಾರ ನೋಟಿಸ್ ಜಾರಿ ಮಾಡಿದೆ.

ಹೈಕೋರ್ಟ್ ಆದೇಶ ಪ್ರಶ್ನಿಸಿ ಅಶ್ವತ್ಥರಾಮ್ ರಾಠೋಡ್ ಎಂಬುವವರು ಸಲ್ಲಿಸಿದ್ದ ವಿಶೇಷ ಮೇಲ್ಮನವಿ ಅರ್ಜಿಯನ್ನು ನ್ಯಾ.ಎಂ.ಎA.ಸುAದರೇಶ್ ಹಾಗೂ ನ್ಯಾ.ಸತೀಶ್ ಚಂದ್ರ ಶರ್ಮಾ ಅವರ ಪೀಠವು ವಿಚಾರಣೆ ನಡೆಸಿತು. ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಪ್ರಿಯಾಂಕ್ ಖರ್ಗೆಯವರು ಸುಳ್ಳು ಜಾತಿ ಪ್ರಮಾಣಪತ್ರ ಹಾಗೂ ಶೈಕ್ಷಣಿಕ ದಾಖಲೆಗಳನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಿರುವುದಲ್ಲದೇ, ಉಚಿತ ಗ್ಯಾರಂಟಿಗಳ ಮೂಲಕ ಮತದಾರರಿಗೆ ಆಮಿಷವೊಡ್ಡಿ ವಿಧಾನಸಭೆ ಚುನಾವಣೆಯಲ್ಲಿ ಗೆದ್ದಿದ್ದು, ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕು ಎಂದು ಅರ್ಜಿದಾರರು ಕೋರಿದ್ದರು.ಪ್ರಿಯಾಂಕ್ ಅವರು ಪರಿಶಿಷ್ಟ ಜಾತಿ ಪ್ರಮಾಣ ಪತ್ರದ ಬದಲು ಗ್ರಾಮ ಪಂಚಾಯಿತಿ ಚುನಾವಣೆಗೆ ಸಲ್ಲಿಸಲಾಗುವ ಜಾತಿ ಮತ್ತು ಆದಾಯ ಪ್ರಮಾಣಪತ್ರ ಸಲ್ಲಿಸಿದ್ದಾರೆ. ಅದೂ ಸಹ 2021ರ ಪ್ರಮಾಣ ಪತ್ರವಾಗಿದೆ ಎಂದು ಅರ್ಜಿದಾರರು ದೂರಿದ್ದಾರೆ.

ರಾಜ್ಯ ವಿಧಾನಸಭಾ ಚುನಾವಣೆ ವೇಳೆ ಅಕ್ರಮ ಆರೋಪಕ್ಕೆ ಸಂಬAಧಿಸಿದAತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಕೂಡ ಸುಪ್ರಿಂಕೋರ್ಟ್ ನೋಟಿಸ್ ಜಾರಿ ಮಾಡಿದೆ. 2023ರಲ್ಲಿವರುಣಾ ವಿಧಾನಸಭಾ ಕ್ಷೇತ್ರದಿಂದ ಸಿದ್ದರಾಮಯ್ಯ ಅವರ ಆಯ್ಕೆ ಪ್ರಶ್ನಿಸಿ ಶಂಕರ್ ಎಂಬುವವರು ಹೈಕೋರ್ಟ್ ಮೆಟ್ಟಿಲೇರಿದ್ದರು ಸಲ್ಲಿಸಿದ್ದರು. ಜನತೆಗೆ ಪಂಚ ಗ್ಯಾರಂಟಿಗಳ ಆಮಿಷ ಒಡ್ಡುವ ಮೂಲಕ ಸಿದ್ದರಾಮಯ್ಯನವರು ಚುನಾವಣೆಯಲ್ಲಿಗೆದ್ದಿದ್ದಾರೆ. ಮತದಾರರಿಗೆ ಆಮಿಷ ನೀಡಿ ಮತದಾರರನ್ನು ಆಕರ್ಷಿಸುವುದು ಜನಪ್ರತಿನಿಧಿಗಳ ಕಾಯಿದೆಯ ನಿಯಮಗಳಿಗೆ ವಿರುದ್ಧವಾಗಿದೆ, ಆದ್ದರಿಂದ ಸಿದ್ದರಾಮಯ್ಯನವರ ಆಯ್ಕೆಯನ್ನು ಅಸಿಂಧುಗೊಳಿಸಬೇಕೆAದು ಮನವಿ ಮಾಡಿದ್ದರು. ಹೈಕೋರ್ಟ್ ಈ ಅರ್ಜಿಯನ್ನು ವಜಾಗೊಳಿಸಿತ್ತು. ಹೈಕೋರ್ಟ್ ಆದೇಶ ಪ್ರಶ್ನಿಸಿ ಶಂಕರ್ ಅವರು ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು. ಸುಪ್ರೀಂ ಕೋರ್ಟ್ನಲ್ಲಿ ನ್ಯಾ. ವಿಕ್ರಮನಾಥ ನೇತೃತ್ವದ ದ್ವಿಸದಸ್ಯ ಪೀಠ ಅರ್ಜಿಯ ವಿಚಾರಣೆ ಕೈಗೆತ್ತಿಕೊಂಡಿದ್ದು, ಸಿಎಂ ಸಿದ್ದರಾಮಯ್ಯ ಹಾಗೂ ರಾಜ್ಯ ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿಗೊಳಿಸಿದೆ.

 

    

   

             

     

             

           
   

 

 

   

             

     

             

       
   

  .      

   

             

     

             

           
   

 

 

   

             

     

             

       
   

                

   

             

     

             

           
   

 

 

   

             

     

             

       
   

 

 

 

    

   

             

     

             

           
   

 

 

   

             

     

             

       
   

  .      

   

             

     

             

           
   

 

 

   

             

     

             

       
   

                

   

             

     

             

           
   

 

 

   

             

     

             

       
   

 

Leave a Reply

Your email address will not be published. Required fields are marked *