
ಕಾರ್ಕಳ, ಡಿ.10: ಕಾರ್ಕಳ ತಾಲೂಕಿನ ನಲ್ಲೂರಿನ ಮನೆಯೊಂದರಲ್ಲಿ ನಡೆಯುತ್ತಿದ್ದ ಅಕ್ರಮ ಕಸಾಯಿಖಾನೆಯಲ್ಲಿ ಗೋವುಗಳನ್ನು ಕಡಿದು ಮಾಂಸ ಮಾಡುತ್ತಿದ್ದ ಪ್ರಕರಣದಲ್ಲಿ ಆರೋಪಿ ಆಶ್ರಫ್ ಆಲಿ ಎಂಬಾತನ ವಿರುದ್ಧ ಕೇಸ್ ದಾಖಲಾಗಿತ್ತು. ಆದರೆ ಇದೀಗ ಅಕ್ರಮ ಕಸಾಯಿಖಾನೆಗೆ ಗೋವುಗಳನ್ನು ಮಾರಾಟ ಮಾಡಿದ ಪ್ರಕರಣದಲ್ಲಿ ನಲ್ಲೂರಿನ ಶಿವಪ್ರಸಾದ್ ಯಾನೆ ಅಣು ಮಡಿವಾಳ ಎಂಬಾತನನ್ನು ಬಂಧಿಸಲಾಗಿದೆ.
ಅಕ್ರಮ ಕಸಾಯಿಖಾನೆಯಲ್ಲಿ ದನಗಳನ್ನು ಕಡಿದು ಮಾಂಸ ಮಾಡುತ್ತಿದ್ದ ವಿಚಾರದಲ್ಲಿ ಆರೋಪಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ವಿಶ್ವ ಹಿಂದು ಪರಿಷತ್, ಭಜರಂಗ ದಳದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು.
ಇತ್ತ ಶಿವಪ್ರಸಾದ್ ಬಂಧನವಾಗುತ್ತಿದ್ದಂತೆಯೇ ಆತ ಹಿಂದೂ ಸಂಘಟನೆ ಕಾರ್ಯಕರ್ತ ಎಂದು ಕಾಂಗ್ರೆಸ್ ಕಾರ್ಯಕರ್ತರು ಆರೋಪಿಸಿ ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ಹರಿಬಿಟ್ಟಿದ್ದಾರೆ.
ಆದರೆ ಕಾರ್ಕಳ ಭಜರಂಗದಳ ಸಂಘಟನೆಯು ಬಂಧಿತ ಶಿವಪ್ರಸಾದ್ ಹಿಂದೂ ಸಂಘಟನೆ ಕಾರ್ಯಕರ್ತನಲ್ಲ,ಆತನಿಗೆ ಹಿಂದೂ ಸಂಘಟನೆಗೆ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದೆ.
.
.
