
ಕಾರ್ಕಳ, ಡಿ.15: ಕಾರ್ಕಳ ತಾಲೂಕು ಇಪ್ಪತ್ತೊಂದನೆಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಡಾ. ಸುಧಾಕರ ಶೆಟ್ಟಿ, ಅಧ್ಯಕ್ಷರು ಪದ್ಮ ಗೋಪಾಲ ಎಜುಕೇಶನ್ ಟ್ರಸ್ಟ್ ಗಣಿತ ನಗರ ಕುಕ್ಕುಂದೂರು ಇವರ ಪ್ರಾಯೋಜಕತ್ವದಲ್ಲಿ ದಿ| ಗೋಪಾಲ ಭಂಡಾರಿ ಇವರ ಸ್ಮರಣಾರ್ಥ ಕನ್ನಡ ನಾಡು – ನುಡಿ – ಸಂಸ್ಕೃತಿ – ಸಾಹಿತ್ಯ ಅನಾವರಣಕ್ಕೆ ಕೊಡುಗೆ ನೀಡುತ್ತಿರುವ “ಸೃಜನ ಸಾಹಿತ್ಯ ಸೌರಭ ಪ್ರಶಸ್ತಿ 2025-26” ಕ್ಕೆ ಕನ್ನಡ ಸಂಘ ಕಾಂತಾವರ (ರಿ.) ಆಯ್ಕೆಯಾಗಿದೆ.
ಪ್ರಶಸ್ತಿಯು ಹತ್ತು ಸಾವಿರ ರೂಪಾಯಿ ನಗದು ಹಾಗೂ ಶಾಶ್ವತ ಫಲಕವನ್ನು ಒಳಗೊಂಡಿರುತ್ತದೆ ಎಂದು ಕನ್ನಡ ಸಾಹಿತ್ಯ ಪರಿಷತ್ತು ಕಾರ್ಕಳ ತಾಲೂಕು ಘಟಕ ಪ್ರಕಟಣೆಯಲ್ಲಿ ತಿಳಿಸಿದೆ.
.
.
