
ಬೆಳಗಾವಿ,ಡಿ.16: ಪಶ್ಚಿಮಘಟ್ಟದ ಪರಿಸರ ಸೂಕ್ಷ್ಮ ಪ್ರದೇಶಕ್ಕೆ ಸಂಬAಧಿಸಿದ ಕಸ್ತೂರಿ ರಂಗನ್ ವರದಿಯನ್ನು ಒಪ್ಪಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸದನಕ್ಕೆ ಮಾಹಿತಿ ನೀಡಿದರು.
ಪ್ರಶ್ನೋತ್ತರ ವೇಳೆಯಲ್ಲಿ ಕಾಂಗ್ರೆಸ್ ಸದಸ್ಯ ಐವನ್ ಡಿಸೋಜಾ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಪಶ್ಚಿಮಘಟ್ಟಕ್ಕೆ ಸಂಬAಧಿಸಿದAತೆ ಕೇಂದ್ರ ಸರ್ಕಾರದಿಂದ 6 ಅಧಿಸೂಚನೆ ಹೊರಡಿಸಿದ್ದು, 2024ರಲ್ಲಿ 6ನೇ ಅಧಿಸೂಚನೆ ಆದ ಬಳಿಕ 10 ಜಿಲ್ಲೆಗಳ ಜನಪ್ರತಿನಿಧಿಗಳ ಸಭೆ ಕರೆದು ಚರ್ಚಿಸಿ ನಂತರ ಸಚಿವ ಸಂಪುಟದ ಉಪಸಮಿತಿ ಸಭೆಯಲ್ಲೂ ಪರಾಮರ್ಶಿಸಿ, ಸಚಿವ ಸಂಪುಟದಲ್ಲಿ ಕಸ್ತೂರಿ ರಂಗನ್ ವರದಿಗೆ ರಾಜ್ಯದ ಒಪ್ಪಿಗೆ ಸಾಧ್ಯವಿಲ್ಲವೆಂದು ನಿರ್ಣಯಿಸಿ ಕೇಂದ್ರಕ್ಕೆ ಪತ್ರ ಬರೆದಿದ್ದೇವೆ ಎಂದು ಸ್ಪಷ್ಟಪಡಿಸಿದರು.
ಕಸ್ತೂರಿ ರಂಗನ್ ವರದಿಯಲ್ಲಿ ರಾಜ್ಯದ ಪಶ್ಚಿಮಘಟ್ಟದ ಸುಮಾರು 20,668 ಚದರ ಕಿಲೋ ಮೀಟರ್ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವಂತೆ ಶಿಫಾರಸು ಮಾಡಲಾಗಿದೆ, ಈ ಪೈಕಿ 16 ಸಾವಿರ ಚದರ ಕಿ.ಮೀ ಈಗಾಗಲೇ ರಾಜ್ಯದ ವನ್ಯಜೀವಿ ಧಾಮಗಳು, ರಾಷ್ಟ್ರೀಯ ಉದ್ಯಾನ, ಹುಲಿ ಸಂರಕ್ಷಿತ ಪ್ರದೇಶ, ರಕ್ಷಿತ ಅರಣ್ಯ ಪ್ರದೇಶದಲ್ಲಿದ್ದು, ಉಳಿದ 4 ಸಾವಿರ ಚದರಕಿ.ಮೀ ವ್ಯಾಪ್ತಿ ವರದಿಯಲ್ಲಿದೆ. ಆದರೆ ನಾವು ಇದನ್ನು ತಿರಸ್ಕರಿಸಿದ್ದು, ಈ ಭಾಗದ ಜನರಿಗೆ ಯಾವುದೇ ತೊಂದರೆ ಇಲ್ಲ ಎಂದು ಸ್ಪಷ್ಟಪಡಿಸಿದರು.
.
.
