
ಕಾರ್ಕಳ,ಡಿ.17:ತಾಲೂಕಿನ ಮಾಳ ಗ್ರಾಮದ ಮುಳ್ಳೂರು ಎಂಬಲ್ಲಿ ಮದ್ಯವ್ಯಸನಿ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮುಳ್ಳೂರಿನ ವಿಷ್ಣು ನಾಯಕ್ ಆತ್ಮಹತ್ಯೆ ಮಾಡಿಕೊಂಡವರು. ಕೂಲಿ ಕೆಲಸ ಮಾಡಿಕೊಂಡಿದ್ದ ವರು ವಿಪರೀತ ಮದ್ಯಪಾನ ಮಾಡುತ್ತಿದ್ದರು. ಅಲ್ಲದೆ ಹೃದಯ ಸಂಬಂದಿ ಕಾಯಿಲೆಯಿಂದ ಬಳಲುತ್ತಿದ್ದರು. ಈ ಬಗ್ಗೆ ಕಾರ್ಕಳ ಸರಕಾರಿ ಆಸ್ಪತ್ರೆ ಹಾಗೂ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ತಮಗಿರುವ ಅನಾರೋಗ್ಯ ಹಾಗೂ ಮದ್ಯಪಾನದ ಚಟದಿಂದ ಬೇಸತ್ತು ಡಿ. 15 ರಂದು ಮನೆಯ ಅಡುಗೆ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಕುರಿತು ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
.
.
