
ಕಾರ್ಕಳ, ಡಿ. 17: ದಿ. ಯತೀಶ್ ಶೆಟ್ಟಿ ಅಭಿಮಾನಿ ಬಳಗ ದೊಂಡೆರಂಗಡಿ ಇದರ ವತಿಯಿಂದ ಯತೀಶ್ ಶೆಟ್ಟಿ ಸ್ಮರಣಾರ್ಥ ಡಿಸೆಂಬರ್ 20ರಂದು ದೊಂಡೆರಂಗಡಿಯಲ್ಲಿ
ರಾಷ್ಟ್ರ ಮಟ್ಟದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿ ನಡೆಯಲಿದೆ.
ರಾಷ್ಟ್ರ ಮಟ್ಟದ ಕ್ರೀಡಾಪಟುಗಳು ಭಾಗವಹಿಸಲಿದ್ದು,ಈ ಪಂದ್ಯಾವಳಿಯಲ್ಲಿ ರಾಷ್ಟ ಮಟ್ಟದ 8 ತಂಡಗಳ ಲೀಗ್ ಮಾದರಿ ಪಂದ್ಯಾಟ ಹಾಗೂ ಕಾರ್ಕಳ ವಿಧಾನ ಸಭಾ ಕ್ಷೇತ್ರದ 16 ತಂಡಗಳ ಕಬಡ್ಡಿ ಪಂದ್ಯಾಟ ನಡೆಯಲಿದೆ ಎಂದು ಆಯೋಜಕರು ಪ್ರಕಟಣೆ ತಿಳಿಸಿದ್ದಾರೆ.
.
.
