
ನವದೆಹಲಿ,ಡಿ.22: ದೆಹಲಿಯಿಂದ ಮುಂಬಯಿಗೆ ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಹಠಾತ್ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ತುರ್ತು ಭೂಸ್ಪರ್ಶ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ.
ಸೋಮವಾರ ಮುಂಜಾನೆ ಏರ್ ಇಂಡಿಯಾ AI887 ವಿಮಾನವು ದೆಹಲಿಯಿಂದ ಟೇಕಾಫ್ ಆಗಿತ್ತು. ವಿಮಾನ ಹಾರಾಟದ ಕೆಲವೇ ನಿಮಿಷಗಳಲ್ಲಿ ತಾಂತ್ರಿಕ ಸಮಸ್ಯೆಯಿಂದಾಗಿ ದೆಹಲಿಯಲ್ಲಿಯೇ ತುರ್ತು ಭೂಸ್ಪರ್ಶ ಮಾಡಿದೆ. ವಿಮಾನದಲ್ಲಿರುವ ಎಲ್ಲಾ ಪ್ರಯಾಣಿಕರು, ಸಿಬ್ಬಂದಿಗಳು ಸುರಕ್ಷತವಾಗಿದ್ದಾರೆ ಎಂದು ವಿಮಾನ ಯಾನ ಸಂಸ್ಥೆ ತಿಳಿಸಿದೆ.
ಈ ಘಟನೆಯಿಂದ ಅದೃಷ್ಟವಶಾತ್ ಮಹಾ ದುರಂತವೊಂದು ತಪ್ಪಿದಂತಾಗಿದೆ.

.
.
