
ಕಾರ್ಕಳ, ಡಿ.23:ಮಾಜಿ ಪ್ರಧಾನಿ,ರಾಜಕೀಯದ ಅಜಾತಶತ್ರು ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ಶತಾಬ್ದಿ ಪ್ರಯುಕ್ತ ಡಿ.25 ರಂದು ಕಾರ್ಕಳ ಬಿಜೆಪಿ ವತಿಯಿಂದ ಅಟಲ್ ಸ್ಮರಣೆ ಕಾರ್ಯಕ್ರಮ ನಡೆಯಲಿದೆ ಎಂದು ಕಾರ್ಕಳ ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್ ತಿಳಿಸಿದರು.
ಅವರು ಕಾರ್ಕಳದ ಪತ್ರಿಕಾ ಭವನದಲ್ಲಿ ಮಂಗಳವಾರ ನಡೆದ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿ,ದೇಶದಾದ್ಯಂತ ಬಿಜೆಪಿ ಪಕ್ಷವು ಸುಮಾರು 14 ಕೋಟಿ ಮಿಕ್ಕಿ ಜನ ಸದಸ್ಯತ್ವ ಪಡೆಯಲು ಹಾಗೂ ದೇಶದಲ್ಲೆಡೆ ಬಿಜೆಪಿ ಅಧಿಕಾರಕ್ಕೆ ಬರಲು ಅಟಲ್ ಬಿಹಾರಿ ವಾಜಪೇಯಿ ಕಾರಣೀಭೂತರು.ಈ ಮಹಾನ್ ನಾಯಕರನ್ನು ಸ್ಮರಣೆ ಮಾಡುವ ನಿಟ್ಟಿನಲ್ಲಿ ಅವರ ಜನ್ಮ ದಿನವಾದ ಡಿ.25ರಂದು ಅಟಲ್ ಸ್ಮರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ಈ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್
ಸಂತೋಷ್ ಪ್ರಧಾನ ಭಾಷಣ ಮಾಡಲಿದ್ದು, ಗುರುವಾರ ಸಂಜೆ 5 ಗಂಟೆಗೆ ತಾಲೂಕು ಕಚೇರಿ ಆವರಣದಲ್ಲಿರುವ ಅಟಲ್ ಬಿಹಾರಿ ವಾಜಪೇಯಿ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ ತದನಂತರ ಕುಕ್ಕುಂದೂರು ಮೈದಾನದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಅಟಲ್ ಜೀವನ ಚರಿತ್ರೆಯ ಕುರಿತು 15 ನಿಮಿಷಗಳ ವಿಡಿಯೋ ಪ್ರದರ್ಶನವಾಗಲಿದೆ.ಇದಲ್ಲದೇ ಈ ಕಾರ್ಯಕ್ರಮದಲ್ಲಿ 6 ಶಕ್ತಿ ಕೇಂದ್ರಗಳ ಮಹಿಳಾ ಮೋರ್ಚಾ ತಂಡಗಳು ಸಮೂಹ ಗೀತೆ ಹಾಡಲಿದ್ದಾರೆ ಎಂದರು.
ಈ ಕಾರ್ಯಕ್ರಮದಲ್ಲಿ ಯುವಮೋರ್ಚಾ ಕಾರ್ಯಕರ್ತರು ಬಿಳಿಪಂಚೆ ಬಿಳಿ ಶರ್ಟ್ ಧರಿಸಿ ಕಾರ್ಯಕ್ರಮಕ್ಕೆ ಮೆರುಗು ನೀಡಲಿದ್ದಾರೆ. ಇದಲ್ಲದೇ ಬೂತ್ ಮಟ್ಟದ ಕಾರ್ಯಕರ್ತರು , ಹಿರಿಯ ಕಾರ್ಯಕರ್ತರು ಭಾಗವಹಿಸಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ವಿಶೇಷವಾಗಿ ದೋಸೆ ಕ್ಯಾಂಪ್ ಗಮನ ಸೆಳೆಯಲಿದ್ದು,ಈ ಕಾರ್ಯಕ್ರಮದಲ್ಲಿ ಸುಮಾರು 2500 ಸಾವಿರ ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆಯಿದೆ ಎಂದರು.
ಅಟಲ್ ಹೆಸರನ್ನು ಸ್ಮರಣೀಯಗೊಳಿಸಲು ಅವರ ಹೆಸರಿನಲ್ಲಿ ಶಾಲಾ ಆವರಣದಲ್ಲಿ ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
2500 ಕಾರ್ಯಕರ್ತರು ಸೇರುವ ನಿರೀಕ್ಷೆಯಿದೆ.
ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಮಹಾವೀರ ಹೆಗ್ಡೆ, ಬಿಜೆಪಿ ರಾಜ್ಯ ಕಾರ್ಯದರ್ಶಿ ವಿಖ್ಯಾತ್ ಶೆಟ್ಟಿ,ತಾಲೂಕು ಬಿಜೆಪಿ ಪ್ರಧಾನ ಕಾರ್ಯದರ್ಶಿ ಬೋಳ ಸತೀಶ್ ಪೂಜಾರಿ, ಯುವ ಮೋರ್ಚಾ ಅಧ್ಯಕ್ಷ ರಾಕೇಶ್ ಶೆಟ್ಟಿ ಉಪಸ್ಥಿತರಿದ್ದರು


.
.
