
ಬೆಂಗಳೂರು,ಡಿ.26: ರಾಜ್ಯ ಸರ್ಕಾರವು ಕೆಲವು ಇಲಾಖೆಗಳ ಟ್ಯಾಕ್ಸ್ ಡಿಡಕ್ಷೆಡ್ ಅಟ್ ಸೋರ್ಸ್ (ಟಿಡಿಎಸ್) ಪಾವತಿ ಬಗ್ಗೆ ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ.ಸರ್ಕಾರದ ಕೆಲವು ಇಲಾಖೆಗಳಲ್ಲಿ ಟಿಡಿಎಸ್ ಮೊತ್ತವನ್ನು ಆದಾಯ ತೆರಿಗೆ ಇಲಾಖೆಗೆ ವಿಳಂಬವಾಗಿ ಪಾವತಿಸುತ್ತಿರುವ ವಿಚಾರ ಸರ್ಕಾರದ ಗಮನಕ್ಕೆ ಬಂದಿದೆ. ಹಿನ್ನಲೆಯಲ್ಲಿ ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಮುಖ್ಯ ಲೆಕ್ಕಾಧಿಕಾರಿಗಳ ಕಛೇರಿಯಲ್ಲಿ 2010-11ರವರೆಗಿನ ಅವಧಿಯಲ್ಲಿ ಟಿಡಿಎಸ್ ಮೊತ್ತವನ್ನು ಆದಾಯ ತೆರಿಗೆ ಇಲಾಖೆಗೆ ಪಾವತಿಸಿ ಫೈಲ್ ಮಾಡಲು ವಿಳಂಬಿಸಿದ್ದರಿAದ ಸರ್ಕಾರಕ್ಕೆ ಆರ್ಥಿಕ ನಷ್ಟ ಉಂಟಾಗಿದ್ದು, ಈ ವಿಷಯವನ್ನು ಸಾರ್ವಜನಿಕ ಲೆಕ್ಕಪತ್ರ ಸಮಿತಿಯು ಗಂಭೀರವಾಗಿ ಪರಿಗಣಿಸಿದೆ.
ಆದ್ದರಿಂದ, ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ಅಧಿಕಾರಿ /ಸಿಬ್ಬಂದಿಗಳು ಇನ್ನು ಮುಂದೆ ಇಂತಹ ಸನ್ನಿವೇಶಗಳಿಗೆ ಅವಕಾಶ ನೀಡದೇ, ಟಿಡಿಎಸ್ ಮೊತ್ತವನ್ನು ಆದಾಯ ತೆರಿಗೆ ಇಲಾಖೆಗೆ ಸಕಾಲದಲ್ಲಿ ಪಾವತಿಸಲು ಕ್ರಮವಹಿಸಬೇಕು,ಇಲ್ಲವಾದಲ್ಲಿ ಸಂಬAಧಪಟ್ಟ ಅಧಿಕಾರಿ ಅಥವಾ ನೌಕರರ ವಿರುದ್ಧ ನಿಯಮಾನುಸಾರ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.


.
.
