
ಕಾರ್ಕಳ, ಡಿ.26: ಅಂಡಾರು ಗ್ರಾಮದ ಚಿಕ್ಕಾಡಿ ನಿವಾಸಿ ನಿವೃತ್ತ ಶಿಕ್ಷಕ ಕೃಷ್ಣ ಶೆಟ್ಟಿ(72) ಶುಕ್ರವಾರ ಮುಂಜಾನೆ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು. ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕೃಷ್ಣ ಶೆಟ್ಟಿಯವರು ಸುಧೀರ್ಘ 32 ವರ್ಷಗಳ ಕಾಲ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದು, ಕಾರ್ಕಳ ತಾಲೂಕಿನ ಶಿರ್ಲಾಲು ಸೂಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು.ಕೃಷ್ಣ ಶೆಟ್ಟಿಯವರು ಶಿರ್ಲಾಲು ಗಣೇಶೋತ್ಸವ ಸಮಿತಿಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು.


.
.
