
ಬೆಂಗಳೂರು,ಡಿ. 30:ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ (ಕೆಇಆರ್ಸಿ) ‘ಟಾಪ್-ಅಪ್’ ಹೆಸರಿನಲ್ಲಿ ವಿದ್ಯುತ್ ದರ ಹೆಚ್ಚಳ ಘೋಷಿಸಿದೆ. ಇದು ಪೂರ್ಣ ಪರಿಷ್ಕರಣೆಯಾಗಿರದೆ ಮಾರುಕಟ್ಟೆ ಏರಿಳಿತಗಳಿಗೆ ತಕ್ಕಂತೆ ಗ್ರಾಹಕರಿಗೆ ಪ್ರತಿ ಯೂನಿಟ್ಗೆ 8-10 ಪೈಸೆ ಹೆಚ್ಚಳವಾಗುವ ನಿರೀಕ್ಷೆಯಿದ್ದು, ಗೃಹ ಜ್ಯೋತಿ ಯೋಜನೆಯ ಕಾರಣ ದರ ಕಡಿತ ಸಾಧ್ಯವಿಲ್ಲವೆಂದು ಆಯೋಗ ತಿಳಿಸಿದೆ .
ಮಾರ್ಚ್ 2025 ರಲ್ಲಿ KERC ವಿದ್ಯುತ್ ದರ ಪರಿಷ್ಕರಣೆಯನ್ನು ಘೋಷಿಸಿದಾಗ, ಮೂರು ವರ್ಷಗಳ ಕಾಲ ಸುಂಕಗಳನ್ನು ಸ್ಥಗಿತಗೊಳಿಸಲು ತೀರ್ಮಾನಿಸಿತ್ತು. ಆದರೆ ಮಾರುಕಟ್ಟೆಯ ಏರಿಳಿತಗಳು ಮತ್ತು ವಿದ್ಯುತ್ ಸರಬರಾಜು ಕಂಪನಿಗಳಲ್ಲಿರುವ (ಎಸ್ಕಾಮ್ಗಳು) ಬಾಕಿಗಳನ್ನು ಆಧರಿಸಿ ಇದೀಗ ವಾರ್ಷಿಕವಾಗಿ ಸಣ್ಣ ಪ್ರಮಾಣದ ತಿದ್ದುಪಡಿ ಮಾಡಲಾಗುತ್ತಿದೆ. ಇದನ್ನೇ ಟಾಪ್-ಅಪ್ ಎಂದು ಕರೆಯಲಾಗುತ್ತದೆ ಎಂದು ಕೆಇಆರ್ಸಿ ಅಧ್ಯಕ್ಷ ಪಿ. ರವಿ ಕುಮಾರ್ ತಿಳಿಸಿದ್ದಾರೆ.
ಈ ಹೊಸ ಮಾದರಿಯಲ್ಲಿ ಮೂರು ವರ್ಷಕ್ಕೊಮ್ಮೆ ಮಾತ್ರ ದರ ಪರಿಷ್ಕರಣೆ ನಡೆಯಲಿದೆ. ಟಾಪ್-ಅಪ್ ಎಲ್ಲಾ ಎಸ್ಕಾಂಗಳಿಗೆ ಸಮಾನವಾಗಿ ಅನ್ವಯವಾಗಲಿದ್ದು, ಪ್ರತಿ ಯೂನಿಟ್ಗೆ ಗರಿಷ್ಠ 8–10 ಪೈಸೆ ಮಾತ್ರ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.


.
.
