
ಕಾರ್ಕಳ, ಜ.07:ಕಾರ್ಕಳ ಉಪವಿಭಾಗದ ನೂತನ ಡಿವೈಎಸ್ಪಿ ಆಗಿ ಮಂಗಳೂರು ಪಶ್ಚಿಮ ವಲಯ ಐಜಿಪಿ ಕಚೇರಿಯಲ್ಲಿ ಡಿವೈಎಸ್ಪಿ ಆಗಿ ಕಾರ್ಯನಿರ್ವಹಿಸುತ್ತಿದ್ದ ಬೆಳ್ಳಿಯಪ್ಪ ಕೆ. ಯು. ಅವರನ್ನು ನೇಮಕ ಮಾಡಿ ರಾಜ್ಯ ಸರಕಾರ ಆದೇಶಿಸಿದೆ.
ಕಾರ್ಕಳದ ಎಎಸ್ಪಿಯಾಗಿದ್ದ ಡಾ. ಹರ್ಷಪ್ರಿಯಂವದಾ ಅವರನ್ನು ಬೆಂಗಳೂರಿನ ಸಿಐಡಿ ವಿಭಾಗದ ಎಸ್ಪಿಯಾಗಿ ಬಡ್ತಿ ನೀಡಿ ವರ್ಗಾಯಿಸಲಾಗಿದ್ದು,ಅವರ ಜಾಗಕ್ಕೆ ಬೆಳ್ಳಿಯಪ್ಪ ನೇಮಕಗೊಂಡಿದ್ದಾರೆ.
ಬೆಳ್ಳಿಯಪ್ಪ ಅವರು ಈ ಹಿಂದೆ ಜಿಲ್ಲೆಯ ವಿವಿಧ ಠಾಣೆಯಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಆಗಿ ಹಾಗೂ ಕುಂದಾಪುರ ಉಪ ವಿಭಾಗದಲ್ಲಿ ಡಿವೈಎಸ್ಪಿ ಆಗಿ ಸೇವೆ ಸಲ್ಲಿಸಿದ್ದರು.
ಜಿಲ್ಲೆಯ ಹಲವು ಪ್ರಮುಖ ಹಾಗೂ ಸವಾಲಿನ ಅಪರಾಧ ಪ್ರಕರಣಗಳನ್ನು ಭೇದಿಸುವಲ್ಲಿ ತನಿಖಾಧಿಕಾರಿಯಾಗಿ ಇವರು ಪ್ರಮುಖ ಪಾತ್ರ ವಹಿಸಿದ್ದರು.

.
.
