Share this news

ಕಾರ್ಕಳ, ಜ.07: ಸಾಮಾಜಿ ಜಾಲತಾಣವಾದ ಫೇಸ್ ಬುಕ್ಕಿನಲ್ಲಿ ಯುವಕನೋರ್ವ ಸುಳ್ಯ ವಿಧಾನಸಭಾ ಕ್ಷೇತ್ರದ ದಲಿತ ಸಮುದಾಯದ ಶಾಸಕಿ ಭಾಗೀರಥಿ ಮುರುಳ್ಯ ಅವರಿಗೆ ನಿಂದಿಸಿರುವ ಘಟನೆ ನಡೆದಿದೆ.
ಬಿಲ್ಲವ ಸಂದೇಶ್ ಎಂಬಾತ ತನ್ನ ಪೇಜ್ ನಲ್ಲಿ ಭಾಗೀರಥಿಯವರ ಕುರಿತು ಕೆಟ್ಟದಾಗಿ ಬರೆದಿದ್ದಾನೆ. ದಲಿತ ಸಮುದಾಯದ ಶಾಸಕಿ ಭಾಗೀರಥಿ ಮುರುಳ್ಯ ಇವರು ಶೋಷಣೆಗೊಳಗಾದ ದಲಿತ ಸಮುದಾಯದ ಪರ ನಿಲ್ಲದೇ ಇಂದು ಎಲ್ಲರನ್ನು ಅಗಲಿ ತೆರಳಿದ್ದಾರೆ. ಇವರ ಅಗಲಿಕೆಯನ್ನು ಭರಿಸುವ ಶಕ್ತಿ ಬ್ಲೂಜೆಪಿ ಪಕ್ಷದ ಕಾರ್ಯಕರ್ತರಿಗೆ ದೇವರು ನೀಡಲಿ ಎಂದು ಹೇಳುತ್ತಾ ಭಾವಪೂರ್ಣ ಶ್ರದ್ದಾಂಜಲಿ ಅರ್ಪಿಸುತ್ತಿದ್ದೇವೆ ಎಂದು ಬರೆದುಕೊಂಡಿದ್ದಾನೆ.
ಶಾಸಕಿಗೆ ಆಗಿರುವ ಅವಮಾನದ ಕುರಿತು ಸಾರ್ವಜನಿಕ ವಲಯದಲ್ಲಿ ತೀವೃ ಆಕ್ರೋಶ ವ್ಯಕ್ತವಾಗಿದ್ದು, ದಲಿತ ಮಹಿಳೆಗೆ ಸಾಮಾಜಿಕ ಜಾಲತಾಣದಲ್ಲಿ ಶ್ರದ್ದಾಂಜಲಿ ಸಲ್ಲಿಸಿ ಅತ್ಯಂತ ಕೀಳಾಗಿ ನಿಂದಿಸಿ ಈ ರೀತಿ ಅವಮಾನ ಮಾಡಿರುವ ವ್ಯಕ್ತಿಯನ್ನು ತಕ್ಷಣವೇ ಬಂಧಿಸುವAತೆ ಆಗ್ರಹಿಸಿದ್ದಾರೆ.

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

Leave a Reply

Your email address will not be published. Required fields are marked *