
ಕಾರ್ಕಳ,ಜ.08 :ಮುಂಬರುವ2027ರಲ್ಲಿ ಕಾರ್ಕಳದ ಬಾಹುಬಲಿ ಮಹಾ ಮಸ್ತಕಾಭಿಷೇಕ ನಡೆಯಲಿದ್ದು,ಈ ಮಹಾ ಮಸ್ತಕಾಭಿಷೇಕಕ್ಕೆ ದೇಶ ವಿದೇಶಗಳಿಂದ ಸಹಸ್ರಾರು ಯಾತ್ರಾತ್ರಿಗಳು, ಪ್ರವಾಸಿಗರು ಕಾರ್ಕಳ ಕ್ಷೇತ್ರಕ್ಕೆ ಆಗಮಿಸುವ ಹಿನ್ನೆಲೆಯಲ್ಲಿ ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅನೇಕ ಜೈನ ಬಸದಿಗಳು, ಕೆರೆಗಳು, ದೇವಸ್ಥಾನಗಳು, ಯಾತ್ರಿ ನಿವಾಸಗಳನ್ನು ಜೊತೆಗೆ ಅನೇಕ ಪ್ರವಾಸಿ ತಾಣಗಳನ್ನು ಅಭಿವೃದ್ಧಿಪಡಿಸಲು ಹಾಗೂ ಪ್ರವಾಸೋಧ್ಯಮ ದೃಷ್ಟಿಯಲ್ಲಿ ವಿವಿಧ ಪ್ರವಾಸಿ ತಾಣಗಳನ್ನು ಅಭಿವೃದ್ಧಿಪಡಿಸಲು ಅನುದಾನ ಬಿಡುಗಡೆಗೊಳಿಸುವಂತೆ ದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಶಾಸಕ ಸುನಿಲ್ ಕುಮಾರ್ ಬುಧವಾರ ಭೇಟಿ ಮಾಡಿ ಮನವಿ ನೀಡಿದರು. ಈ ಕುರಿತು ಪ್ರತಿಕ್ರಿಯಿಸಿದ ಸಚಿವರು ಶೀಘ್ರವಾಗಿ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವ ಭರವಸೆಯನ್ನು ನೀಡಿದ್ದಾರೆ.

.
.
