
ನವದೆಹಲಿ,ಜ.13 : ಬೀದಿ ನಾಯಿಗಳ ಕಡಿತಕ್ಕೆ ಆಯಾ ರಾಜ್ಯ ಸರ್ಕಾರಗಳೇ ಪರಿಹಾರ ನೀಡಬೇಕು ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ದೇಶದಾದ್ಯಂತ ಬೀದಿ ನಾಯಿಗಳ ಕಾಟ ಮಿತಿಮೀರಿದ್ದು, ಇವುಗಳ ನಿಯಂತ್ರಣಕ್ಕೆ ಸರ್ಕಾರಗಳು ಸೂಕ್ತ ಕ್ರಮಕೈಗೊಳ್ಳಬೇಕಿದೆ ಎಂದು ಸುಪ್ರೀಂ ಅಭಿಪ್ರಾಯಪಟ್ಟಿದೆ. ಬಹುತೇಕ ನಾಯಿ ದಾಳಿ ಪ್ರಕರಣಗಳಲ್ಲಿ ಮಕ್ಕಳು ಹಾಗೂ ವೃದ್ಧರು ಗಾಯಗೊಂಡ ಹಾಗೂ ಮೃತಪಟ್ಟ ಘಟನೆಗಳು ನಡೆದಿವೆ ಎಂದ ನ್ಯಾಯಮೂರ್ತಿ ವಿಕ್ರಮ್ ನಾಥ್ ಅವರು, ನಾಯಿಗಳಿಗೆ ಆಹಾರ ನೀಡುವ ಜನರು ಇಂತಹ ಘಟನೆಗಳಿಗೆ ಕಾರಣರಾಗಿದ್ದಾರೆ ಎಂದು ಹೇಳಿದರು. ಬೀದಿ ನಾಯಿಗಳಿಗೆ ಆಹಾರ ಹಾಕುವವರು ನಾಯಿಗಳನ್ನು ಮನೆಯಲ್ಲಿ ಸಾಕಬೇಕು ಎಂದರು.
ಪ್ರಮುಖವಾಗಿ ಜನಸಂದಣಿ ಇರುವ ಕಡೆ ಬೀದಿ ನಾಯಿಗಳ ಸಂಖ್ಯೆ ಹೆಚ್ಚಿದ್ದು ಪ್ರಮುಖವಾಗಿ ಎಲ್ಲಾ ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳು, ಬಸ್ ನಿಲ್ದಾಣಗಳು, ಕ್ರೀಡಾ ಸಂಕೀರ್ಣಗಳು ಮತ್ತು ರೈಲ್ವೆ ನಿಲ್ದಾಣಗಳಿಂದ ಬೀದಿ ನಾಯಿಗಳನ್ನು ಸ್ಥಳಾಂತರಿಸಬೇಕೆAದು ಕೋರ್ಟ್ ಆದೇಶಿಸಿದೆ. ಇದಲ್ಲದೇ ಸಾರ್ವಜನಿಕ ಸ್ಥಳಗಳಿಗೆ ಜನರು ನಾಯಿಗಳನ್ನು ಬಿಡಬಾರದು ಎಂದು ನ್ಯಾಯಾಲಯವು ನಿರ್ದೇಶಿಸಿದೆ.


.
.
