Share this news

 

 

 

 

ಚಿಕ್ಕಬಳ್ಳಾಪುರ,ಜ.14: ಅನುಮತಿಯಿಲ್ಲದೇ ಅಳವಡಿಸಿದ್ದ ಬ್ಯಾನರ್ ತೆರವುಗೊಳಿಸಿದ ವಿಚಾರವಾಗಿ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಕಾಂಗ್ರೆಸ್ ಮುಖಂಡ ಕೆಪಿಸಿಸಿ ರಾಜ್ಯ ಸಂಯೋಜಕ ರಾಜೀವ್ ಗೌಡ ಅವಾಚ್ಯ ಹಾಗೂ ಅಶ್ಲಿಲ ಪದಗಳಿಂದ ನಿಂದಿಸಿ ಬೆದರಿಕೆಯೊಡ್ಡಿದ ಘಟನೆ ನಡೆದಿದೆ.
ಶಿಡ್ಲಘಟ್ಟ ನಗರಸಭೆಯ ಅನುಮತಿ ಪಡೆಯದೇ ನಡುರಸ್ತೆಯಲ್ಲಿ ಅಕ್ರಮವಾಗಿ ಅಳವಡಿಸಿದ್ದ ಬ್ಯಾನರ್ ತೆರವುಗೊಳಿಸಿದ್ದಕ್ಕೆ ಕೋಪಗೊಂಡ ರಾಜೀವ್ ಗೌಡ ದೂರವಾಣಿ ಕರೆ ಮೂಲಕ ಅಮೃತಾ ಅವರಿಗೆಅವ್ಯಾಚ್ಚ ಶಬ್ದಗಳನ್ನು ಬಳಸಿ ಬೆದರಿಕೆ ಹಾಕಿರುವ ಆಡಿಯೋ ವೈರಲ್ ಆಗಿದೆ.
ಈ ಘಟನೆಯಿಂದ ಶಿಡ್ಲಘಟ್ಟ ನಗರಸಭೆಯ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗ ಭಯಭೀತಗೊಂಡಿದ್ದು, ಸಾರ್ವಜನಿಕ ಸೇವೆ ನಿರ್ವಹಿಸುವ ಅಧಿಕಾರಿಗಳಿಗೆ ಈ ರೀತಿಯ ಬೆದರಿಕೆಗಳು ಖಂಡನೀಯ ಎಂಬ ಆಕ್ರೋಶ ವ್ಯಕ್ತವಾಗಿದೆ. ಪ್ರಕರಣಕ್ಕೆ ಸಂಬAಧಿಸಿದAತೆ ಮುಂದಿನ ಕಾನೂನು ಕ್ರಮ ಕೈಗೊಳ್ಳುವಂತೆ ನಗರಸಭೆ ಅಧಿಕಾರಿಗಳು ಮೇಲಧಿಕಾರಿಗಳ ಗಮನಕ್ಕೆ ತಂದಿದ್ದಾರೆ.

ಅಧಿಕಾರಿಗಳು, ಸಿಬ್ಬಂದಿ ಮುಂದೆ ಆಯುಕ್ತೆ ಅಮೃತಾ ಕಣ್ಣೀರು:

ರಾಜೀವ್ ಗೌಡ ಜೀವ ಬೆದರಿಕೆ ಹಾಕಿದ್ದಕ್ಕೆ ಮನನೊಂದು ಆಯುಕ್ತೆ ಅಮೃತಾ ಅಧಿಕಾರಿಗಳು, ಸಿಬ್ಬಂದಿ ಮುಂದೆ ಕಣ್ಣೀರು ಹಾಕಿದ್ದಾರೆ. ನಾನು ಸಾಫ್ಟ್ವೇರ್ ಇಂಜಿನಿಯರ್ ಆಗಿದ್ದೆ, ಪತಿ NRI ಆಗಿದ್ದಾರೆ. ಐಟಿ ಕೆಲಸ ಬಿಟ್ಟು ನಾಗರಿಕರ ಸೇವೆಗೆ ಬಂದೆ. ತಂದೆಯ ಆಸೆ ಈಡೇರಿಸಲು KAS ಪರೀಕ್ಷೆ ಬರೆದಿದ್ದೆ. ಇಲ್ಲಿ ನೋಡಿದರೆ ಅವಾಚ್ಯವಾಗಿ ನಿಂದಿಸಿ ಜೀವಬೆದರಿಕೆ ಹಾಕಿದ್ದಾರೆ ಎಂದು ಅಮೃತಾ ಅಳಲು ತೋಡಿಕೊಂಡಿದ್ದಾರೆ.ಏತನ್ಮಧ್ಯೆ ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಅಧಿಕಾರಿಗಳು, ಸಿಬ್ಬಂದಿ ಪ್ರತಿಭಟನೆ ನಡೆಸಿದ್ದಾರೆ.ರಾಜೀವ್ ಗೌಡ ಬಂಧನಕ್ಕೆ ಆಗ್ರಹಿಸಿ ಅಧಿಕಾರಿಗಳು, ಸಿಬ್ಬಂದಿ ಕೆಲಸ ಕಾರ್ಯ ಬಹಿಷ್ಕರಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

Leave a Reply

Your email address will not be published. Required fields are marked *