Share this news

 

 

​ಕಾರ್ಕಳ,ಜ.17: ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಅವರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ ಪ್ರಕರಣದ ಕುರಿತಂತೆ ನ್ಯಾಯಾಲಯದ ಆದೇಶ ಉಲ್ಲಂಘಿಸಿದ ಆರೋಪಿ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಇನ್ನಾ ಯೋಗಿಶ್ ಆಚಾರ್ಯ ವಿರುದ್ಧ ಕಾರ್ಕಳ ನ್ಯಾಯಾಲಯವು ಅರೆಸ್ಟ್ ವಾರಂಟ್ ಜಾರಿ ಮಾಡಿದೆ.

​ ಏನಿದು ಪ್ರಕರಣ:

ಶಾಸಕ ಸುನಿಲ್ ಕುಮಾರ್ ವಿರುದ್ಧ
​ಕಾರ್ಕಳ ತಾಲೂಕಿನ ಇನ್ನಾ ಗ್ರಾಮದ ಯೋಗಿಶ್ ಆಚಾರ್ಯ ಮತ್ತು ಹಿರ್ಗಾನ ಗ್ರಾಮದ ರಾಧಾಕೃಷ್ಣ ನಾಯಕ್ ಅವರು ಫೇಸ್‌ಬುಕ್‌ನಲ್ಲಿ ವಿವಾದಾತ್ಮಕ ಪೋಸ್ಟನ್ನು ಹಂಚಿಕೊಂಡಿದ್ದರು. “ಕೋವಿಡ್ ಸಮಯದಲ್ಲಿ ಶಾಸಕರು ಬಂಡವಾಳಶಾಹಿಗಳ ಹಾಗೂ ಗೇರು ಬೀಜ ಕಂಪನಿಗಳ ಪರವಾಗಿ ಕೆಲಸ ಮಾಡುತ್ತಿದ್ದಾರೆ ಮತ್ತು ಜನಸಾಮಾನ್ಯರ ಕಷ್ಟಕ್ಕೆ ಸ್ಪಂದಿಸುತ್ತಿಲ್ಲ” ಎಂಬ ಬರಹಗಳನ್ನು ಹಂಚಿಕೊಂಡಿದ್ದರು. ಇದರಿಂದ ತಮ್ಮ ಗೌರವಕ್ಕೆ ಧಕ್ಕೆಯಾಗಿದೆ ಎಂದು ಶಾಸಕ ಸುನಿಲ್ ಕುಮಾರ್ ಬೆಂಗಳೂರಿನ ಸಿವಿಲ್ ನ್ಯಾಯಾಲಯದಲ್ಲಿ ಮಾನಹಾನಿ ಕೇಸ್ ದಾಖಲಿಸಿದ್ದರು.
ಈ ಪ್ರಕರಣದ ವಿಚಾರಣೆ ಕೈಗೆತ್ತಿಕೊಂಡ ಬೆಂಗಳೂರಿನ 12ನೇ ಸಿಟಿ ಸಿವಿಲ್ ನ್ಯಾಯಾಲಯವು ಕಳೆದ ​2023ರ ಜನವರಿ 7ರಂದು ತೀರ್ಪು ನೀಡಿತ್ತು.ಈ ಪ್ರಕರಣದಲ್ಲಿ ಇಬ್ಬರೂ ಪ್ರತಿವಾದಿಗಳು ಶಾಸಕರಲ್ಲಿ ಬೇಷರತ್ ಕ್ಷಮೆಯಾಚಿಸಬೇಕು ಮತ್ತು ನಷ್ಟ ಪರಿಹಾರ ನೀಡಬೇಕು ಎಂದು ಆದೇಶಿಸಿತ್ತು.ಈ ಆದೇಶದ ಹಿನ್ನೆಲೆಯಲ್ಲಿ ರಾಧಾಕೃಷ್ಣ ನಾಯಕ್ ಅವರು ನ್ಯಾಯಾಲಯಕ್ಕೆ ಹಾಜರಾಗಿ ಕ್ಷಮೆಯಾಚಿಸಿ, ಪರಿಹಾರದ ಮೊತ್ತವನ್ನು ಪಾವತಿಸಿದ್ದರು‌.ಆದರೆ ಯೋಗಿಶ್ ಆಚಾರ್ಯ ನ್ಯಾಯಾಲಯದ ಸೂಚನೆಯನ್ನು ಪಾಲಿಸದ ಹಿನ್ನೆಲೆಯಲ್ಲಿ, ಶಾಸಕರು ನ್ಯಾಯಾಲಯದ ಆದೇಶ ಜಾರಿಗಾಗಿ ಅರ್ಜಿ ಸಲ್ಲಿಸಿದ್ದರು.ಈ
​ಪ್ರಕರಣವು ಕಾರ್ಕಳದ ಪ್ರಧಾನ ಸಿವಿಲ್ ನ್ಯಾಯಾಲಯಕ್ಕೆ ವರ್ಗಾವಣೆಯಾದ ನಂತರ, ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಕೋಮಲ ಆರ್.ಸಿ. ಅವರು, ನ್ಯಾಯಾಲಯದ ಆದೇಶವನ್ನು ಗೌರವಿಸದ ಯೋಗಿಶ್ ನಯನ್ ಇನ್ನಾ ಅವರನ್ನು ಬಂಧಿಸಿ ಹಾಜರುಪಡಿಸುವಂತೆ ವಾರಂಟ್ ಹೊರಡಿಸಿದ್ದಾರೆ

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

Leave a Reply

Your email address will not be published. Required fields are marked *