
ಕಾರ್ಕಳ, ಜ.18: ಕರಾವಳಿಯ ಗಂಡು ಕಲೆ ಎಂದೇ ಜನಜನಿತವಾಗಿರುವ ಯಕ್ಷಗಾನ ಕಲೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಮತ್ತು ಮಕ್ಕಳಲ್ಲಿ ಸಾಂಸ್ಕೃತಿಕ ಆಸಕ್ತಿ ಮೂಡಿಸುವ ನಿಟ್ಟಿನಲ್ಲಿ, ಕಾರ್ಕಳ ತಾಲೂಕಿನ ಬೈಲೂರು ಮೈನ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ (SDMC), ಶಾಲಾ ಪೂರ್ವ ವಿದ್ಯಾರ್ಥಿ ಸಂಘ, ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದದ ಸಂಯುಕ್ತ ಆಶ್ರಯದಲ್ಲಿ ಶಾಲಾ ಮಕ್ಕಳಿಗಾಗಿ ‘ಬಡಗುತಿಟ್ಟಿನ ಯಕ್ಷಗಾನ ತರಬೇತಿ’ ಹಾಗೂ ‘ಯಕ್ಷ ಶಿಕ್ಷಣ’ ಕಾರ್ಯಕ್ರಮದ ಉದ್ಘಾಟನೆಯು
ಜ. 22, ರಂದು ಅಪರಾಹ್ನ 2 ಗಂಟೆಗೆ ಶಾಲೆಯ ಸಭಾಂಗಣದಲ್ಲಿ ನಡೆಯಲಿದೆ.
ಈ ವಿಶೇಷ ತರಬೇತಿ ಕಾರ್ಯಕ್ರಮದಲ್ಲಿ ಪೋಷಕರು, ಹಿರಿಯ ವಿದ್ಯಾರ್ಥಿಗಳು ಹಾಗೂ ಕಲಾ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಂಘಟಕರು ವಿನಂತಿಸಿಕೊಂಡಿದ್ದಾರೆ.

.
.
.
.
