
ಹೆಬ್ರಿ, ಜ.19: ಶ್ರೀ ಜನಾರ್ದನ ವಿದ್ಯಾಮಂದಿರ ಎಳ್ಳಾರೆ ಮತ್ತು ವಿದ್ಯಾಭಾರತಿ ಕರ್ನಾಟಕ, ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ನಡೆದ ಜಿಲ್ಲಾ ಮಟ್ಟದ “ಪಾದಪಂಕಜಂ” ಕುಣಿತ ಭಜನಾ ಸ್ಪರ್ಧೆಯಲ್ಲಿ ಹೆಬ್ರಿ ಪಿ ಆರ್ ಎನ್ ಅಮೃತಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ ಪಡೆದಿದ್ದಾರೆ. ವಿದ್ಯಾರ್ಥಿಗಳು 5,000/ರೂ ನಗದು, ಫಲಕ, ಪ್ರಶಸ್ತಿ ಪತ್ರ ಪಡೆದಿದ್ದಾರೆ.
ಈ ಸಂದರ್ಭದಲ್ಲಿ ಸಂಸ್ಥೆಯ ಮಹೇಶ್ ಹೈಕಾಡಿ, ಸಾವಿತ್ರಿ ಕಿಣಿ, ವೇದವ್ಯಾಸ ತಂತ್ರಿ ಮಡಾಮಕ್ಕಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ ಶ್ರೀನಿವಾಸ ಪೂಜಾರಿ ಯರ್ಲಪಾಡಿ ಮತ್ತು ಸಂಸ್ಥೆಯ ಗಣಿತ ಶಿಕ್ಷಕಿ ಪಂಚಮಿ ಇವರನ್ನು ಮತ್ತು ವಿದ್ಯಾರ್ಥಿಗಳನ್ನು ವಿದ್ಯಾಲಯದ ಅಧ್ಯಕ್ಷ ಶೈಲೇಶ್ ಕಿಣಿ ಮತ್ತು ಸಂಸ್ಥೆಯ ಮುಖ್ಯಸ್ಥೆ ಅಪರ್ಣಾ ಆಚಾರ್ ಅಭಿನಂದಿಸಿದ್ದಾರೆ.

.
.
.
.
