Share this news

 

 

 

 

ಬೆಂಗಳೂರು, ಜ.19: ವಿದೇಶದಿಂದ ಅಕ್ರಮವಾಗಿ ಚಿನ್ನ ಸ್ಮಗ್ಲಿಂಗ್ ಮಾಡಿ ಸಿಕ್ಕಿಬಿದ್ದ ನಟಿ ರನ್ಯಾ ರಾವ್ ಅವರ ತಂದೆ, ಡಿಜಿಪಿ ಡಾ.ರಾಮಚಂದ್ರ ರಾವ್ ಅವರು ಪೊಲೀಸ್ ಸಮವಸ್ತ್ರದಲ್ಲೇ ತನ್ನ ಕಚೇರಿಯಲ್ಲಿ ಮಹಿಳೆಯ ಜೊತೆ ರಾಸಲೀಲೆಯಲ್ಲಿ ತೊಡಗಿಕೊಂಡ ವೀಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.
ಈಗಾಗಲೇ ಪೊಲೀಸರೇ ದರೋಡೆ, ಸುಲಿಗೆಯಂತಹ ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿ ಜೈಲು ಸೇರಿರುವ ಘಟನೆ ನಡೆದ ಬೆನ್ನಲ್ಲೇ ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ ಪ್ರಕರಣ ಇಡೀ ಪೊಲೀಸ್ ಇಲಾಖೆಯೇ ತಲೆತಗ್ಗಿಸುವಂತಾಗಿದೆ. ವೈರಲ್ ಆಗಿರುವಂತ ವೀಡಿಯೋಗಳಲ್ಲಿ ಡಿಜಿಪಿ ಡಾ.ರಾಮಚಂದ್ರರಾವ್ ಅವರು ತಮ್ಮ ಕಚೇರಿಯಲ್ಲೇ ಕುಳಿತು, ಸಮವಸ್ತçದಲ್ಲಿ ಮಹಿಳೆಯೊಂದಿಗೆ ವಿವಿಧ ಭಂಗಿಗಳಲ್ಲಿ ಅಸಭ್ಯವಾಗಿ ವರ್ತಿಸಿರುವುದನ್ನು ಕಾಣಬಹುದಾಗಿದೆ.ರಾಜ್ಯದ ಪ್ರಸಿದ್ಧ ಮಾಡೆಲ್ ಒಬ್ಬರ ಜೊತೆಗೆ ಡಿಜಿಪಿ ಡಾ.ರಾಮಚಂದ್ರರಾವ್ ಸರಸವಾಡುವ ವೀಡಿಯೋ ಮಾಡಿಕೊಂಡಿದ್ದರು ಎನ್ನಲಾಗಿದೆ.

ಕೆ. ರಾಮಚಂದ್ರ ರಾವ್ ಕರ್ನಾಟಕ ಕೇಡರ್​​​ನ ಐಪಿಎಸ್ ಅಧಿಕಾರಿಯಾಗಿದ್ದು, ಈ ಹಿಂದೆ ಕರ್ನಾಟಕ ರಾಜ್ಯ ಪೊಲೀಸ್ ವಸತಿ ನಿಗಮ ಲಿಮಿಟೆಡ್‌ನ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಮತ್ತು ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಗಿ ಸೇವೆ ಸಲ್ಲಿಸಿದ್ದರು. 2023ರಲ್ಲಿ ಇವರನ್ನು ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ ಲಿಮಿಟೆಡ್‌ನ ಡಿಜಿಪಿ ಮತ್ತು ಅಧ್ಯಕ್ಷ ಮತ್ತು ಎಂಡಿ ಆಗಿ ಬಡ್ತಿ ನೀಡಲಾಗಿತ್ತು. ಬಳಿಕ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ ಡಿಜಿಪಿಯಾಗಿ ನೇಮಕಗೊಂಡಿದ್ದರು. ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಇವರ ಮಲಮಗಳು ರನ್ಯಾ ರಾವ್ ಭಾಗಿ ಪ್ರಕರಣ ಸಂಬಂಧ ಪೊಲೀಸರ ಸವಲತ್ತುಗಳನ್ನು ದುರುಪಯೋಗಪಡಿಸಿಕೊಂಡ ಆರೋಪದಡಿ ಮಾರ್ಚ್ 2025ರಲ್ಲಿ ಇವರನ್ನು ಕಡ್ಡಾಯ ರಜೆಗೆ ಕಳುಹಿಸಲಾಗಿತ್ತು.

ಡಿಜಿಪಿ ರಾಮಚಂದ್ರ ರಾವ್ ಕಚೇರಿಯಲ್ಲೇ ರಾಸಲೀಲೆಯಲ್ಲಿ ತೊಡಗಿರುವ ಆಘಾತಕಾರಿ ಪ್ರಕರಣದ ವಿರುದ್ಧ ಸಿಎಂ ಸಿದ್ಧರಾಮಯ್ಯ ಕೆಂಡಾಮಂಡಲರಾಗಿದ್ದು, ಈ ಕುರಿತು ವರದಿ ಕೇಳಿದ್ದಾರೆ. ಪೊಲೀಸರ ಇಂತಹ ದುರ್ವರ್ತನೆಯ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ತೀವೃ ಆಕ್ರೋಶ ವ್ಯಕ್ತವಾಗಿದೆ.

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

Leave a Reply

Your email address will not be published. Required fields are marked *