
ಮಂಗಳೂರು, ಜ.22:ದೇವಸ್ಥಾನಗಳಲ್ಲಿ ಭಗವಾಧ್ವಜ ಹಾರಿಸಬಾರದು ಎಂದು ಬಂಟ್ವಾಳ ಮಾಜಿ ಶಾಸಕ ಕಾಂಗ್ರೆಸ್ ಹಿರಿಯ ಮುಖಂಡ ರಮಾನಾಥ ರೈ ವಿವಾದತ್ಮಕ ಹೇಳಿಕೆಯನ್ನು ನೀಡಿದ್ದಾರೆ.
ರಮಾನಾಥ ರೈಯವರ ವಿವಾದಿತ ಹಾಗೂ ಕೀಳುಮಟ್ಟದ ಹೇಳಿಕೆಯ ವಿರುದ್ಧ ಎಲ್ಲೆಡೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.ರಮಾನಾಥ ರೈ ಹೇಳಿಕೆಯು ಹಿಂದೂ ನಾಯಕರನ್ನು ಕೇರಳಿಸಿದ್ದು ಮಾತ್ರವಲ್ಲದೇ ,ಕೆಲವು ಕಾಂಗ್ರೆಸ್ ನಾಯಕರು ಕೂಡ ರಮಾನಾಥ ರೈ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.ವಿವಾದಾತ್ಮಕ ಹೇಳಿಕೆಯಿಂದ ರೈಗೆ ತೀವ್ರ ಮುಜುಗರವಾಗಿದೆ. ಇದಲ್ಲದೇ ಈ ಹೇಳಿಕೆ ವಿರುದ್ದ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗಳು ನಡೆಯುತ್ತಿದೆ. ನೀವು ಒಂದು ದೈವದ ಗುತ್ತು ಮನೆಯವರಾಗಿದ್ದು ಹೀಗೆ ಮಾತನಾಡುವುದು ಸರಿಯಲ್ಲ ಎಂದು ನೆಟ್ಟಿಗರು ಕಿಡಿಕಾರಿದ್ದಾರೆ.
ಉಡುಪಿ ಮಠದ ಪರ್ಯಾಯ ಮಹೋತ್ಸವದಲ್ಲಿ ಉಡುಪಿ ಜಿಲ್ಲಾಧಿಕಾರಿ ಟಿಕೆ ಸ್ವರೂಪ ಕೇಸರಿ ಧ್ವಜ ಹಾರಿಸಿದ್ದು ಭಾರೀ ವಿವಾದಕ್ಕೆ ಕಾರಣವಾಗಿತ್ತು. ಮಾಜಿ ಸಚಿವ ರಮಾನಾಥ ರೈ ಇದನ್ನು ಖಂಡಿಸುವ ಭರದಲ್ಲಿ ದೇವಾಲಯದಲ್ಲಿ ಕೇಸರಿ ಬಾವುಟ ಹಾಕಬೇಡಿ ಎಂದು ಹೇಳಿದ್ದಾರೆ.
ಉಡುಪಿ ಡಿಸಿ ಭಗವಾಧ್ವಜ ಹಾರಿಸಿದ್ದ ತಪ್ಪು, ಇದನ್ನು ಒಪ್ಪಲು ಸಾಧ್ಯವಿಲ್ಲ. ಅವರ ಮೇಲೆ ಸರಿಯಾದ ಕ್ರಮ ಆಗಬೇಕು. ದೇವಾಲಯದ ಕಾರ್ಯಕ್ರಮದಲ್ಲಿ ರಾಜಕೀಯ ಪ್ರೇರಿತ ಪತಾಕೆ ಧಿಕ್ಕರಿಸಬೇಕು. ದೇಗುಲದಲ್ಲಿ ಕಾಂಗ್ರೆಸ್, ಕೇಸರಿ, ಹಸಿರು ಯಾವುದೇ ಬಾವುಟ ಹಾಕಬೇಡಿ ಎಂದು ಹೇಳಿದ್ದಾರೆ. ದೇವಸ್ಥಾನದಲ್ಲಿ ನಡೆಯುವುದು ಕಾರ್ಯಕ್ರಮವೂ ಎಲ್ಲರಿಗೂ ಸಂಬಂಧಿಸಿದೆ. ಈ ಕಾರಣಕ್ಕೆ ದೇಗುಲದಲ್ಲಿ ಕೇಸರಿ ಧ್ವಜ ಹಾರಿಸಬಾರದು. ದೇಗುಲದ ಉತ್ಸವಗಳಲ್ಲಿ
ಭಗವಾಧ್ವಜ ಹಾರಿಸುವುದನ್ನು ವಿರೋಧಿಸಬೇಕು ಎಂದು ಅವರು ಮಂಗಳೂರಿನ ಗಾಂಧಿ ಪ್ರತಿಮೆ ಬಳಿ ಉಪವಾಸ ಸತ್ಯಾಗ್ರಹ ವೇಳೆ ಹೇಳಿದ್ದಾರೆ.

.
.
.
.
