
ಕಾರ್ಕಳ,ಜ.23: ಕರ್ನಾಟಕ ಸರಕಾರ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ , ಕರ್ನಾಟಕ ಒಲಿಂಪಿಕ್ ಸಂಸ್ಥೆ ಹಾಗೂ ಜಿಲ್ಲಾಡಳಿತ ತುಮಕೂರು ಜಿಲ್ಲೆ ಇವರ ಸಂಯುಕ್ತ ಆಶಯದಲ್ಲಿ ತುಮಕೂರಿನಲ್ಲಿ ನಡೆದ ಕರ್ನಾಟಕ ಕ್ರೀಡಾಕೂಟ 2025-26 ರಲ್ಲಿ 86 ಕೆಜಿ ವಿಭಾಗದ ರಾಜ್ಯಮಟ್ಟದ ವೈಟ್ ಲಿಫ್ಟಿಂಗ್ ನಲ್ಲಿ ಎಸ್ ವಿ ಟಿ ವನಿತಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಾಣಿಜ್ಯ ವಿಭಾಗದ ಕುಮಾರಿ ಭುವನೇಶ್ವರಿ ಪ್ರಥಮ ಸ್ಥಾನ ಪಡೆದಿದ್ದಾರೆ.
ಸಾಧಕ ವಿದ್ಯಾರ್ಥಿಯನ್ನು ಆಡಳಿತ ಮಂಡಳಿ, ಪ್ರಾಂಶುಪಾಲರು, ಹಿರಿಯ ಸಹ ಶಿಕ್ಷಕರು, ಉಪನ್ಯಾಸಕರು, ಅಧ್ಯಾಪಕರು, ಶಿಕ್ಷಕೇತರ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಅಭಿನಂದಿಸಿರುತ್ತಾರೆ.

.
.
.
.
