Share this news

 

 

ಕಾರ್ಕಳ,ಜ.23 ಇಂದಿನ ವಿದ್ಯಾರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಮಂಡಳಿಯವರು ಮಾದರಿ ಪ್ರಶ್ನೆ ಪತ್ರಿಕೆಗಳನ್ನು ನೀಡುವ ಮೂಲಕ ಪರೀಕ್ಷಾ ತಯಾರಿ ನಡೆಸಲು ಸುಲಭವಾಗುವಂತೆ ಮಾಡಿದ್ದಾರೆ. ಅನೇಕ ಮಾಧ್ಯಮಗಳು ವಿದ್ಯಾರ್ಥಿಗಳಿಗೆ ಕಲಿಯಲು ಮಾರ್ಗದರ್ಶನವನ್ನು ನೀಡುವುದರಿಂದ ಮತ್ತು ಅಧ್ಯಾಪಕರು ನಿಸ್ವಾರ್ಥ ಸೇವೆಯನ್ನು ಮಾಡುವುದರಿಂದ ವಿದ್ಯಾರ್ಥಿಗಳಿಗೆ ಕಲಿಕೆ ಸುಲಭವಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಅಂಕಗಳನ್ನು ಪಡೆದು ಸಂಸ್ಥೆಗೆ ಕೀರ್ತಿ ತರುವಂತಾಗ ಬೇಕು ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಪ್ರಭಾಕರ ಕೊಂಡಳ್ಳಿ ಹೇಳಿದರು.

ಅವರು ಕಾರ್ಕಳ ಕೆ.ಎಮ್.ಇ.ಎಸ್ ಸಂಸ್ಥೆಯ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಪರೀಕ್ಷೆ ಎದುರಿಸಲು ಮಾರ್ಗದರ್ಶನ ನೀಡಿ ಮಾತನಾಡಿದರು.
ಹಲವಾರು ಕಥೆಗಳ ಮೂಲಕ ವಿದ್ಯಾರ್ಥಿಗಳು ಪರೀಕ್ಷೆಯನ್ನು ಹೇಗೆ ಎದುರಿಸಬೇಕು ಎಂಬುದನ್ನು ವಿವರಿಸಿದರು.

ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಕೆ.ಬಾಲಕೃಷ್ಣ ರಾವ್, ಪ್ರೈಮರಿ ವಿಭಾಗದ ಮುಖ್ಯಸ್ಥೆ ಲೊಲಿಟ ಡಿ’ಸಿಲ್ವ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸ್ಟಾಗತಿಸಿದರು.
ಪ್ರೌಢಶಾಲೆಯ ಶಿಕ್ಷಕಿ ಶೃತಿ ಅತಿಥಿಗಳಿಗೆ ಹೂ ಮತ್ತು ಸ್ಮರಣಿಕೆ ನೀಡಿ ಗೌರವಿಸಿದರು.

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

Leave a Reply

Your email address will not be published. Required fields are marked *