Share this news

 

 

ಕಾರ್ಕಳ,ಜ.24: ಚುನಾವಣಾ ಆಯೋಗವು ಮತದಾರರ ಪಟ್ಟಿಯ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯನ್ನು ಕೈಗೆತ್ತಿಕೊಂಡಿರುವುದರಿಂದ ಕಾಂಗ್ರೆಸ್‌ನ ‘ವೋಟ್ ಚೋರಿ’ ಮಾಡುವವರಿಗೆ ಆತಂಕ ಶುರುವಾಗಿದೆ ಎಂದು ಮಾಜಿ ಸಚಿವ ಹಾಗೂ ಕಾರ್ಕಳ ಶಾಸಕ ಸುನಿಲ್ ಕುಮಾರ್ ಹೇಳಿದರು.

ಅವರು ಕಾರ್ಕಳದ ಖಾಸಗಿ ಹೊಟೇಲ್ ನಲ್ಲಿ ನಡೆದ ಕಾರ್ಕಳ–ಹೆಬ್ರಿ ತಾಲೂಕುಗಳ 209 ಬೂತ್ ಮಟ್ಟದ ಬಿಜೆಪಿ ಏಜೆಂಟ್‌ಗಳ ವಿಶೇಷ ಕಾರ್ಯಾಗಾರದಲ್ಲಿ ಮಾತನಾಡಿದರು.
ಮತದಾರರ ಪಟ್ಟಿ ಸರಿಯಾಗಿದ್ದರೆ ಮಾತ್ರ ಚುನಾವಣೆ ಸರಿಯಾಗಿ ನಡೆಯಲು ಸಾಧ್ಯ. ನುಸುಳಿಕೋರರನ್ನು ಗುರುತಿಸಿ ಹೊರಗಿಡುವುದು ಹಾಗೂ ಪೌರತ್ವವನ್ನು ಸಾಬೀತುಪಡಿಸುವುದು ಅತ್ಯವಶ್ಯಕವಾಗಿದೆ. ಕೇಂದ್ರ ಚುನಾವಣಾ ಆಯೋಗದ ಸೂಚನೆ ಮೇರೆಗೆ ಈ ಪ್ರಕ್ರಿಯೆ ದೇಶಾದ್ಯಂತ ನಡೆಯುತ್ತಿದೆ ಎಂದು ಅವರು ತಿಳಿಸಿದರು.
ಚುನಾವಣಾ ಆಯೋಗದ ಈ ಕ್ರಮವನ್ನು ಸಹಿಸಲಾಗದೇ ಕಾಂಗ್ರೆಸ್ ಅಪಪ್ರಚಾರ ನಡೆಸುತ್ತಿದೆ. ಕೇರಳ, ಬಿಹಾರ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಅನಗತ್ಯ ವಿಚಾರಗಳನ್ನು ಎತ್ತಿ ಹಿಡಿದು ‘ವೋಟ್ ಚೋರಿ’ ಎಂಬ ಆರೋಪ ಮಾಡುತ್ತಿದೆ. ಮತದಾರರ ಪಟ್ಟಿಯಲ್ಲಿರುವ ಲೋಪದೋಷಗಳನ್ನು ಪತ್ತೆಹಚ್ಚಿ ಸರಿಪಡಿಸುವುದು ಚುನಾವಣಾ ಆಯೋಗದ ಕರ್ತವ್ಯವಾಗಿದೆ ಎಂದು ಸುನಿಲ್ ಕುಮಾರ್ ಹೇಳಿದರು.
ಕಾಂಗ್ರೆಸ್ ಅಭಿವೃದ್ಧಿಯನ್ನು ಮರೆತಿದೆ. ಕಾಂಗ್ರೆಸ್ ಮತ್ತು ಅಭಿವೃದ್ಧಿ ಎಂಬುದು ಪರಸ್ಪರ ವಿರುದ್ಧ ಪದಗಳಾಗಿವೆ. ಬಿಜೆಪಿ ಆಧುನಿಕತೆಗೆ ಒತ್ತು ನೀಡುತ್ತಿದೆ. ಇವಿಎಂ ವ್ಯವಸ್ಥೆಯನ್ನು ಪರಿಚಯಿಸಿದ ಕಾಂಗ್ರೆಸ್ ಈಗ ಅದಕ್ಕೆ ವಿರೋಧ ವ್ಯಕ್ತಪಡಿಸಿ ಬ್ಯಾಲೆಟ್ ಪೇಪರ್‌ಗೆ ಹೋಗಬೇಕೆಂದು ಹೇಳುತ್ತಿದೆ. ಕಾಂಗ್ರೆಸ್ ನಾಯಕ ಡಿ.ಕೆ.ಸುರೇಶ್ ಬ್ಯಾಲೆಟ್ ಪೇಪರ್ ಬಳಕೆಗೆ ವಿರೋಧ ವ್ಯಕ್ತಪಡಿಸಿರುವುದು ಕಾಂಗ್ರೆಸ್ ನಾಯಕರೇ ಇದಕ್ಕೆ ವಿರುದ್ಧವಾಗಿದ್ದಾರೆ ಎಂದು ಹೇಳಿದರು.
ಬೂತ್ ಮಟ್ಟದ ಮತದಾರರ ಪಟ್ಟಿ ಪರಿಷ್ಕರಣೆಗೆ ಎಲ್ಲರೂ ಹೊಣೆ ಹೊತ್ತು ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಅವರು ಕರೆ ನೀಡಿದರು.
ಕಾರ್ಯಕ್ರಮದ ಪ್ರಸ್ತಾವಿಕ ಭಾಷಣದಲ್ಲಿ ಕಾರ್ಕಳ ಬಿಜೆಪಿ ಕ್ಷೇತ್ರಾಧ್ಯಕ್ಷ ನವಿನ್ ನಾಯಕ್ ಮಾತನಾಡಿ, ಬೂತ್ ಮಟ್ಟದಲ್ಲಿ ಪಕ್ಷದ ಬಲವರ್ಧನೆ ಮಾಡುವುದು ಬಿಜೆಪಿ ಬೂತ್ ಮಟ್ಟದ ಏಜೆಂಟ್‌ಗಳ ಪ್ರಮುಖ ಜವಾಬ್ದಾರಿಯಾಗಿದೆ ಎಂದರು. 2002ರ ಬಳಿಕ ಕರ್ನಾಟಕದಲ್ಲಿ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ ನಡೆದಿರಲಿಲ್ಲ. ಈ ಬಾರಿ ನಡೆಯುತ್ತಿರುವ ಪರಿಷ್ಕರಣೆಯಲ್ಲಿ ಎಲ್ಲಾ ಏಜೆಂಟ್‌ಗಳು ಸಕ್ರಿಯವಾಗಿ ಭಾಗವಹಿಸಬೇಕು ಎಂದು ಹೇಳಿದರು.
ಕಾರ್ಯಾಗಾರದಲ್ಲಿ ಪುತ್ತೂರಿನ ಮಾಜಿ ಶಾಸಕ ಸಂಜೀವ ಮಠಂದೂರು, ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಮಾಹಿತಿ ನೀಡಿದರು.
ಮಾಧ್ಯಮ ಸಂಚಾಲಕಿಯಾಗಿ ರಜನಿ ಪೈ ಕಾರ್ಯನಿರ್ವಹಿಸಿದರು.
ಜಿಲ್ಲಾ ಕಾರ್ಯದರ್ಶಿ ರೇಶ್ಮಾ ಉದಯ ಶೆಟ್ಟಿ, ಉಪಾಧ್ಯಕ್ಷ ಮಹವೀರ ಹೆಗ್ಡೆ, ಮಣಿರಾಜ ಶೆಟ್ಟಿ ಉಪಸ್ಥಿತರಿದ್ದರು.
ಹರ್ಷವರ್ದನ ಆಚಾರ್ಯ ನಿಟ್ಟೆ ಹಾಗೂ ಯುವ ಮೋರ್ಚಾ ಅಧ್ಯಕ್ಷ ರಾಕೇಶ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

Leave a Reply

Your email address will not be published. Required fields are marked *