
ಬೆಂಗಳೂರು,ಜ.26: ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ 77ನೇ ಗಣರಾಜ್ಯೋತ್ಸವ ವಿಜೃಂಭಣೆಯಿಂದ ಆಚರಿಸಲಾಯಿತು. ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಧ್ವಜಾರೋಹಣ ನೆರವೇರಿಸಿದರು. ಬಳಿಕ ಪೊಲೀಸ್ ಮತ್ತು ಸೇನಾಪಡೆಯಿಂದ ಗೌರವ ವಂದನೆ ಸ್ವೀಕರಿಸಿ ತೆರೆದ ಜೀಪ್‌ನಲ್ಲಿ ಪರೇಡ್ ವೀಕ್ಷಣೆ ಮಾಡಿದರು.
ಕಾರ್ಯಕ್ರಮದಲ್ಲಿ 1,400 ಶಾಲಾ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ, 1,100 ಮಂದಿಯ ಕವಾಯತು, ತಮಿಳುನಾಡು ಪೊಲೀಸರ ಭಾಗವಹಿಸಸಿದರು.
ಸಿಎಂ ಸಿದ್ದರಾಮಯ್ಯ ಸಂವಿಧಾನ ರಕ್ಷಣೆ, ಸಾಮಾಜಿಕ ನ್ಯಾಯದ ಬಗ್ಗೆ ಸಂದೇಶ ನೀಡಿದರು. ಕೆಪಿಸಿಸಿ ಕಚೇರಿಯಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆಶಿವಕುಮಾರ್ ಉಪಸ್ಥಿತಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಧ್ವಜಾರೋಹಣ ನೆರವೇರಿಸಿದರು.
77ನೇ ಗಣರಾಜ್ಯೋತ್ಸವಕ್ಕೆ ದೇಶದ ಜನತೆಗೆ ಶುಭ ಕೋರಿದ ಪ್ರಧಾನಿ ಮೋದಿ
ಭಾರತವು 77ನೇ ಗಣರಾಜ್ಯೋತ್ಸವವನ್ನು ಅತ್ಯಂತ ಸಂಭ್ರಮದಿಂದ ಆಚರಿಸುತ್ತಿದೆ. ಈ ಹಿನ್ನೆಲೆ ಗಣರಾಜ್ಯೋತ್ಸವವು ಪ್ರತಿಯೊಬ್ಬರ ಜೀವನದಲ್ಲಿ ಹೊಸ ಶಕ್ತಿ ಹಾಗೂ ಉತ್ಸಾಹವನ್ನು ತುಂಬಲಿ ಎಂದು ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಶುಭಾಶಯಗಳನ್ನು ತಿಳಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಸಹ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳನ್ನು ತಿಳಿಸಿದ್ದು, ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.

.
.
.
.
