
ಕಾರ್ಕಳ,ಜ. 26: ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾಳ ಇಲ್ಲಿ 77ನೇ ವರ್ಷದ ಗಣರಾಜ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಯಿತು.
ಹಿರಿಯರಾದ ಲಕ್ಷ್ಮಣ ಅವರು ಧ್ವಜಾರೋಹಣ ನೆರವೇರಿಸಿದರು. ನಂತರ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ವಾದಿರಾಜ ಭಟ್, ರವಿ ಸೇರಿಗಾರ್ ಉಪಸ್ಥಿತರಿದ್ದರು.
ಸಭೆಯಲ್ಲಿ ವಿದ್ಯಾರ್ಧಕ ಸಂಘದ ಅಧ್ಯಕ್ಷರು ಗಜಾನನ ಮರಾಠೆ ಕಾರ್ಯದರ್ಶಿ ಗೀತಾ ಸೇರಿಗಾರ್ ಮತ್ತು ಸದಸ್ಯರು ಉಪಸ್ಥಿತರಿದ್ದರು .
ವಿದ್ಯಾರ್ಥಿಗಳಿಂದ ಗಣರಾಜ್ಯೋತ್ಸವದ ಬಗ್ಗೆ ಭಾಷಣ ಮತ್ತು ದೇಶಭಕ್ತಿ ಗೀತೆಗಳ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಮ ಸೇರಿಗಾರ್ ವಹಿಸಿದ್ದರು.ಮುಖ್ಯ ಶಿಕ್ಷಕಿ ಪೂರ್ಣಿಮಾ ಶೆಣೈ ಸ್ವಾಗತಿಸಿ, ಶಿಕ್ಷಕಿ ಶೋಭಾ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ವಸಂತಿ ಧನ್ಯವಾದವಿತ್ತರು.

.
.
.
.
