Share this news

 

 

 

 

ಮಂಗಳೂರು,ಜ.26: ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರಸಭೆಯ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬ್ಯಾನರ್ ತೆರವುಗೊಳಿಸಿದ್ದಕ್ಕೆ ಧಮ್ಕಿ, ಬೆದರಿಕೆ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಕಾಂಗ್ರೆಸ್ ಮುಖಂಡ ರಾಜೀವ್ ಗೌಡನ ಬಂಧನವಾಗಿದೆ. ಈತನ ವಿರುದ್ಧ ಎಫ್‌ಐಆರ್ ದಾಖಲಾದ ಬೆನ್ನಲ್ಲೇ ಬಂಧನದ ಭೀತಿಯಿಂದ ಪರಾರಿಯಾದ ಆತ ಕೊನೆಗೂ ಪೊಲೀಸರ ಕೈಯಲ್ಲಿ ಲಾಕ್ ಆಗಿದ್ದಾನೆ.
ನಗರದ ವೃತ್ತದಲ್ಲಿ ಯಾವುದೇ ಅನುಮತಿ ಪಡೆಯದೇ ಅನಧಿಕೃತವಾಗಿ ಬ್ಯಾನರ್ ಹಾಕಿದ್ದರಿಂದ ಸಂಚಾರಕ್ಕೆ ತೊಡಕಾಗುತ್ತಿದೆ ಎಂಬ ಸಾರ್ವಜನಿಕ ದೂರಿನ ಹಿನ್ನಲೆಯಲ್ಲಿ ಅಧಿಕಾರಿಗಳು ಬ್ಯಾನರ್ ತೆರವುಗೊಳಿಸಿದ್ದರು. ಇದರಿಂದ ಕೆಂಡಾಮAಡಲನಾದ ರಾಜೀವ ಗೌಡ ಪೌರಾಯುಕ್ತೆ ಅಮೃತಾ ಗೌಡ ಸೇರಿದಂತೆ ಸಿಬ್ಬಂದಿಗಳಿಗೆ ಅವಾಚ್ಯವಾಗಿ ನಿಂದಿಸಿ ಜೀವ ಬೆದರಿಕೆ ಹಾಕಿದ್ದ. ಈ ಹಿನ್ನಲೆಯಲ್ಲಿ ಆತನ ವಿರುದ್ಧ ಅಮೃತಾ ಗೌಡ ದೂರು ನೀಡಿದ್ದರು. ಅಮೃತಾ ಅವರ ದೂರಿನ ಬಳಿಕ ತಲೆಮರೆಸಿಕೊಂಡಿದ್ದ ರಾಜೀವ್ ಗೌಡನನ್ನು ಕೊನೆಗೂ ಕೇರಳ ಗಡಿಯಲ್ಲಿ ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿರುವುದಾಗಿ ತಿಳಿದು ಬಂದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

Leave a Reply

Your email address will not be published. Required fields are marked *