
ಕಾರ್ಕಳ, ಜ. 26: ಮರ ಸಾಗಾಟದ ಲಾರಿಯೊಂದು ಕಾರಿಗೆ ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಸೇರಿ ಇಬ್ಬರು ಗಾಯಗೊಂಡ ಘಟನೆ ಸೋಮವಾರ ರಾತ್ರಿ ಸಂಭವಿಸಿದೆ.

ಮರದ ದಿಮ್ಮಿಗಳನ್ನು ಹೇರಿಕೊಂಡು ಹೆಬ್ರಿ ಕಡೆಯಿಂದ ಕಾರ್ಕಳ ಕಡೆಗೆ ಅತಿವೇಗವಾಗಿ ಸಾಗುತ್ತಿದ್ದಾಗ ಅಜೆಕಾರು ಮಸೀದಿ ಬಳಿ ಏಕಾಏಕಿ ಕಾರಿಗೆ ಡಿಕ್ಕಿಯಾಗಿ ಪಲ್ಟಿಯಾಗಿದೆ. ಕಾರ್ಕಳ ಕಡೆಯಿಂದ ಕಾರು ಶಿವಮೊಗ್ಗಕ್ಕೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.
ಈ ಅಪಘಾತದಿಂದ ಕಾರು ನುಜ್ಜುಗುಜ್ಜಾಗಿದ್ದು ಲಾರಿ ಚಾಲಕ ಸೇರಿ ಇತರರಿಗೆ ಗಾಯಗಳಾಗಿವೆ.
ಘಟನಾ ಸ್ಥಳಕ್ಕೆ ಅಜೆಕಾರು ಪೊಲೀಸರು ಭೇಟಿ ನೀಡಿದ್ದಾರೆ. ಗಾಯಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

.
.
.
.
