Share this news

 

 

ಶಿವಮೊಗ್ಗ, ಜ.27: ಮುಂದಿನ ಶೈಕ್ಷಣಿಕ ವರ್ಷಕ್ಕೆ ಮುನ್ನ ರಾಜ್ಯ ಸರ್ಕಾರವು ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ 10,800 ಶಿಕ್ಷಕರ ನೇಮಕಾತಿ ಮಾಡುವ ಚಿಂತನೆ ನಡೆಸಿದೆ ಎಂದು ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಸೋಮವಾರ ತಿಳಿಸಿದ್ದಾರೆ.

ಅವರು ಜಿಲ್ಲಾಡಳಿತ ಆಯೋಜಿಸಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಶಿಕ್ಷಕರ ಕೊರತೆಯನ್ನು ನೀಗಿಸುವ ಉದ್ದೇಶದಿಂದ ಸರ್ಕಾರವು ಈಗಾಗಲೇ 14,499 ಪೂರ್ಣಾವಧಿ ಶಿಕ್ಷಕರನ್ನು ನೇಮಕ ಮಾಡಿದ್ದು, ಮೊದಲ ಬಾರಿಗೆ 51,000 ಅತಿಥಿ ಶಿಕ್ಷಕರನ್ನು ಸಹ ನೇಮಕ ಮಾಡಿದೆ ಎಂದು ಹೇಳಿದರು. ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಕಂಪ್ಯೂಟರ್ ಆಧಾರಿತ ಶಿಕ್ಷಣವನ್ನು ಬಲಪಡಿಸುವ ಉದ್ದೇಶದಿಂದ 5,000 ಶಾಲೆಗಳಲ್ಲಿ ಕಂಪ್ಯೂಟರ್ ಪ್ರಯೋಗಾಲಯಗಳು ಹಾಗೂ ಸ್ಮಾರ್ಟ್ ಕ್ಲಾಸ್‌ಗಳನ್ನು ಸ್ಥಾಪಿಸಲಾಗುತ್ತಿದೆ. ಈ ಯೋಜನೆಗಳಿಗೆ ಸರ್ಕಾರವು 160 ಕೋಟಿ ರೂ. ಅನುದಾನವನ್ನು ಮೀಸಲಿಟ್ಟಿದೆ ಎಂದು ಅವರು ಮಾಹಿತಿ ನೀಡಿದರು.

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

Leave a Reply

Your email address will not be published. Required fields are marked *