
ಕಾರ್ಕಳ, ಜ.27: ಬೆಂಗಳೂರು ಬ್ರಹ್ಮಶ್ರೀ ನಾರಾಯಣ ಗುರು ಧರ್ಮ ಪರಿಪಾಲನಾ ಸಂಘದ ಕಾರ್ಕಳ ತಾಲೂಕು ಘಟಕದ ಅಧ್ಯಕ್ಷರಾಗಿ ಕಾರ್ಕಳ ಪುರಸಭಾ ಮಾಜಿ ಸದಸ್ಯೆ ಮಮತಾ ಅಂಚನ್ ಆಯ್ಕೆಯಾಗಿದ್ದಾರೆ.
ಸಿಗಂದೂರು ಚೌಡೇಶ್ವರಿ ದೇವಸ್ಥಾನದಲ್ಲಿ ನಡೆದ ಶ್ರೀ ನಾರಾಯಣ ಗುರು ತತ್ತ್ವಪೂಜೆ ಹಾಗೂ ದಶಮಾನೋತ್ಸವ ಕ್ರೀಡಾ ಜ್ಯೋತಿಯಾತ್ರೆಯ ಪೂರ್ವಸಿದ್ಧತಾ ಕಾರ್ಯಕ್ರಮದಲ್ಲಿ ವಿವಿಧ ತಾಲೂಕು ಘಟಕಗಳ ಪದಾಧಿಕಾರಿಗಳ ಆಯ್ಕೆ ನಡೆಯಿತು.
ಈ ಸಂದರ್ಭದಲ್ಲಿ ಮಹಿಳಾ ಘಟಕದ ರಾಜ್ಯಾಧ್ಯಕ್ಷರಾದ ಪುಷ್ಪಲತಾ ಚಂದ್ರು ಹಾಗೂ ರಾಜ್ಯಾಧ್ಯಕ್ಷ ಸೈದಪ್ಪ ಗುತ್ತೇದಾರ್ ಹಾಗೂ ಉಡುಪಿ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಮಂಜುಳಾ ಉಪಸ್ಥಿತರಿದ್ದರು.

.
.
.
.
